ಹಾಡಹಗಲೇ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ tumakur saaksha tv
ತುಮಕೂರು : ಕೌಟುಂಬಿಕ ಕಲಹದಿಂದ ಮನನೊಂದು ವ್ಯಕ್ತಿಯೊರ್ವ ಜನರ ಎದುರೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.
ರಘು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದಾರೆ.
ಈತ ತುಮಕೂರು ನಗರದ ಶಿರಾಗೇಟ್ನ ವೃತ್ತದಲ್ಲಿ ಇರುವ ಉದ್ಯಾನವನದಲ್ಲಿ ಜನರು ನೋಡನೋಡುತ್ತಿದ್ದಂತೆ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ತಿಳಿದು ಬಂದಿದೆ.
ಇನ್ನು ಈ ಸಂಬಂಧ ತುಮಕೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.