ದಾವಣಗೆರೆ: ಮೀನು ಹಿಡಿಯಲು ಕೆರೆಗೆ ಇಳಿದಿದ್ದ ವ್ಯಕ್ತಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಈ ಘಟನೆ ಜಿಲ್ಲೆಯ ಜಗಳೂರು ತಾಲೂಕಿನ ತುಪ್ಪದಹಳ್ಳಿ ಎಂಬಲ್ಲಿ ನಡೆದಿದೆ. ಕಿತ್ತೂರು ಗ್ರಾಮದ ನಿವಾಸಿ ಮೂರ್ತಿ(40) ಸಾವನ್ನಪ್ಪಿದ ದುರ್ದೈವಿ. ಈ ವ್ಯಕ್ತಿ ಪ್ರತಿ ದಿನ ಮೀನು ಹಿಡಿದು ಮಾರಾಟ ಮಾಡಿ ಜೀವನ ಸಾಗಿಸುತ್ತಿದ್ದ. ಎಂದನಿಂತೆ ಕೆರೆಯಲ್ಲಿ ಮೀನು ಹಿಡಿಯಲು ಮುಂದಾದ ವೇಳೆ ಇದ್ದಕ್ಕಿದ್ದಂತೆ ತೆಪ್ಪ ಮುಗುಚಿ ಬಿದ್ದು, ಮೀನಿಗೆ ಹಾಕಿದ್ದ ಬಲೆ ಕಾಲಿಗೆ ಸಿಲುಕಿ ಸಾವನ್ನಪ್ಪಿದ್ದಾರೆ.
ಈ ಹಿನ್ನೆಲೆಯಲ್ಲಿ ಅವರು ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಸ್ಥಳೀಯರ ಸಹಾಯದಿಂದ ಮೂರ್ತಿ ಅವರ ಮೃತದೇಹ ಹೊರಗೆ ತೆಗೆಯಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.