ಮಂಗಳೂರು: ನೇತ್ರಾವತಿ ಸೇತುವೆ ಮೇಲೆ ವ್ಯಕ್ತಿಯೊಬ್ಬರು ಕಾರು ನಿಲ್ಲಿಸಿ ನದಿಗೆ ಹಾರಿರುವ ಘಟನೆಯೊಂದು ನಡೆದಿದೆ.
ಚಿಕ್ಕಮಗಳೂರು ಮೂಲದ ಪ್ರಶಾಂತ್ (35) ನದಿಗೆ ಹಾರಿದ ವ್ಯಕ್ತಿ ಎಂದು ಗುರುತಿಸಲಾಗಿದೆ. ಪ್ರಶಾಂತ್ ತಮ್ಮ ಕುಟುಂಬಸ್ಥರೊಂದಿಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಬಂದಿದ್ದ ಎನ್ನಲಾಗಿದೆ. ಕುಟುಂಬ ಸದಸ್ಯರನ್ನು ಆಸ್ಪತ್ರೆಯಲ್ಲಿ ಬಿಟ್ಟು ಕಾರಿನಲ್ಲಿ ಸೇತುವೆ ಬಳಿ ಬಂದಿದ್ದರು. ನಂತರ ನೇತ್ರಾವತಿ ಸೇತುವೆ ಮೇಲೆ ಕಾರು ನಿಲ್ಲಿಸಿ ನದಿಗೆ ಹಾರಿದ್ದಾರೆ ಎನ್ನಲಾಗಿದೆ.
ನದಿಗೆ ಹಾರಿದ್ದನ್ನು ನೋಡಿದ ಸ್ಥಳೀಯರು ರಕ್ಷಣೆಗಾಗಿ ಪ್ರಯತ್ನ ಪಟ್ಟರೂ ಫಲಕಾರಿಯಾಗಲಿಲ್ಲ ಎನ್ನಲಾಗಿದೆ.








