ತನ್ನ ಪಕ್ಕದ ಮನೆಯ ಇಬ್ಬರು ಮಕ್ಕಳನ್ನು ಕತ್ತು ಸೀಳಿ ಕೊಲೆ ಮಾಡಿದ್ದ ವ್ಯಕ್ತಿಯನ್ನು ಪೊಲೀಸರು ಎನ್ ಕೌಂಟರ್ ನಲ್ಲಿ ಹತ್ಯೆ ಮಾಡಿದ್ದಾರೆ.
ಉತ್ತರ ಪ್ರದೇಶದ ಬದೌನ್ನಲ್ಲಿ ಕ್ಷೌರಿಕನೊಬ್ಬ ಪಕ್ಕದ ಮನೆಯಲ್ಲಿದ್ದ 11 ಹಾಗೂ 6 ವರ್ಷದ ಮಕ್ಕಳನ್ನು ಹತ್ಯೆ ಮಾಡಿದ್ದ. ಅಲ್ಲದೇ, ಮತ್ತೋರ್ವನನ್ನು ಗಾಯಗೊಳಿಸಿದ್ದ. ಈ ಕುರಿತು ಮಂಡಿ ಸಮಿತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಆರೋಪಿಯನ್ನು ಸಾಜಿದ್ (22) ಎಂದು ಗುರುತಿಸಲಾಗಿದೆ. ಆತ ಹತ್ಯೆಯ ನಂತರ ಪರಾರಿಯಾಗಿದ್ದ. ಪೊಲೀಸರು ಕಾರ್ಯಾಚರಣೆ ನಡೆಸಿ ಎನ್ಕೌಂಟರ್ ಮಾಡಿ ಆತನನ್ನು ಹತ್ಯೆ ಮಾಡಿದ್ದಾರೆ. ಆರೋಪಿಯು ವಿನೋದ್ ಕುಮಾರ್ ಕುಟುಂಬದೊಂದಿಗೆ ಆಗಾಗ ಜಗಳವಾಡುತ್ತಿದ್ದು, ಆತ ಸಲೂನ್ ಒಂದನ್ನು ನಡೆಸುತ್ತಿದ್ದ ಎನ್ನಲಾಗಿದೆ.
ಸಾಜಿದ್ ಮನೆಗೆ ಹೋದ ವೇಳೆ ವಿನೋದ್ ಕುಮಾರ್ ಪತ್ನಿ ಹಾಗೂ ಮೂವರು ಮಕ್ಕಳಿದ್ದರು. ಏಕಾಏಕಿ ಬಂದ ಆರೋಪಿ ಮಕ್ಕಳ ಮೇಲೆ ಹಲ್ಲೆ ಮಾಡಿದ್ದಾನೆ. ಕೊಲೆಗೆ ಕಾರಣ ತಿಳಿದು ಬಂದಿಲ್ಲ.