ಹಾವೇರಿ: ವ್ಯಕ್ತಿಯೊಬ್ಬ ತಾನು ಪ್ರೀತಿಸಿದ ಯುವತಿಗೆ ಚಾಕುವಿನಿಂದ ಇರಿದ ಘಟನೆಯೊಂದು ಜಿಲ್ಲೆಯಲ್ಲಿ ನಡೆದಿದೆ.
ಈ ಘಟನೆ ಜಿಲ್ಲೆಯ ಶಿಗ್ಗಾವಿಯಲ್ಲಿ ನಡೆದಿದೆ. ಲಕ್ಷ್ಮೀ(20) ಚಾಕು ಇರಿತಕ್ಕೆ ಒಳಗಾದ ಯುವತಿಯಾಗಿದ್ದು, ಮಹೇಶ್ ಮೈಸೂರು ಚಾಕುವಿನಿಂದ ಇರಿದ ವ್ಯಕ್ತಿ ಎನ್ನಲಾಗಿದೆ. ಮಹೇಶ್ ಹಾಗೂ ಲಕ್ಷ್ಮೀ ಕಳೆದ ಎರಡು ವರ್ಷದಿಂದ ಪರಸ್ಪರ ಪ್ರೀತಿಸುತ್ತಿದ್ದರು ಎನ್ನಲಾಗಿದ್ದು, ಈ ಮಧ್ಯೆ ಬೇರೆ ಯುವಕನ ಜೊತೆ ಆಕೆ ಸಂಪರ್ಕದಲ್ಲಿದ್ದಾಳೆಂಬ ಅನುಮಾನದಿಂದ ಚಾಕು ಇರಿದಿದ್ದಾನೆ ಎನ್ನಲಾಗಿದೆ.
ಚಾಕು ಇರಿಯುತ್ತಿದ್ದಂತೆ ಯುವತಿ ತಪ್ಪಿಸಿಕೊಳ್ಳಲು ಯತ್ನಿಸಿದ್ದು, ಕೈ ಹಾಗೂ ಎದೆಗೆ ಸಣ್ಣಪುಟ್ಟ ಗಾಯಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸದ್ಯ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.