ಖಾಸಗಿ ಬಸ್ ನಿಂದ ಆಯತಪ್ಪಿ ಬಿದ್ದ ಪರಿಣಾಮ ನಿರ್ವಾಹಕ ಸಾವನ್ನಪ್ಪಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.
ಮಂಗಳೂರು ನಗರದ ನಂತೂರು ವೃತ್ತದಲ್ಲಿ ಈ ಘಟನೆ ನಡೆದಿದ್ದು, ಬಾಗಲಕೋಟೆ ಮೂಲದ ಈರಯ್ಯ(23) ಸಾವನ್ನಪ್ಪಿರುವ ನಿರ್ವಾಹಕ ಎನ್ನಲಾಗಿದೆ.
ಬಸ್ ಸುರತ್ಕಲ್ ಕಡೆಯಿಂದ ಮಂಗಳೂರು ಕಡೆಗೆ ತೆರಳುತ್ತಿತ್ತು. ಈ ವೇಳೆ ಸರ್ಕಲ್ ಬಳಿ ತಿರುವು ಪಡೆಯುವ ಸಂದರ್ಭದಲ್ಲಿ ಬಸ್ ನ ಬಾಗಿಲು ಬಳಿ ನಿಂತಿದ್ದ ಈರಯ್ಯ ಆಯತಪ್ಪಿ ಕೆಳಗೆ ಬಿದ್ದಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಈರಯ್ಯ ಸುರತ್ಕಲ್ನ ತಡಂಬೈಲ್ನಲ್ಲಿ ವಾಸಿಸುತ್ತಿದ್ದರು. ಕದ್ರಿ ಟ್ರಾಫಿಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.