ಚಲಿಸುವಾಗ ಹೊತ್ತಿ ಉರಿದ ಮಾರುತಿ ವ್ಯಾನ್
ಹಾಸನ: ಚಲಿಸುವಾಗ ಗ್ಯಾಸ್ ಸೋರಿಕೆಯಾಗಿ ಮಾರುತಿ ವ್ಯಾನ್ ಹೊತ್ತಿ ಉರಿದಿದೆ. ಈ ಘಟನೆಯು ಹೊಳೆನರಸೀಪುರ ಪಟ್ಟಣದ ಬಿ.ಹೆಚ್.ರಸ್ತೆಯಲ್ಲಿ ನಡೆದಿದೆ.
ಕಾರು ಚಲಿಸುವಾಗ ಆಕಸ್ಮಾತಾಗಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಚಾಲಕ ರಸ್ತೆ ಬದಿ ಕಾರು ನಿಲ್ಲಿಸಿ ಕೆಳಗಿಳಿದಿದ್ದಾರೆ. ಘಟನೆಯಲ್ಲಿ ಕಾರು ಸಂಪೂರ್ಣ ಸುಟ್ಟು ಕರಕಲಾಗಿದೆ. ಅದೃಷ್ಟವಶಾತ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕದಳ ಬೆಂಕಿಯನ್ನು ನಂದಿಸಿದ್ದಾರೆ. ಘಟನೆಯು ಹೊಳೆನರಸೀಪುರ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.








