ಇನ್ನೆರೆಡು ದಿನ ಭಾರಿ ಮಳೆ ನ.22 ವರೆಗೆ ಮುಂದುವರೆಯುವ ಸಾಧ್ಯತೆ
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ರಾಜ್ಯಾದ್ಯಂತ ನವೆಂಬರ್ 22ರವರೆಗೆ ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ನಗರ ಗ್ರಾಮಾಂತರ ಸೇರಿದಂತೆ ಹಲವೆಡೆ ಭಾರೀ ಮಳೆ ಸಾಧ್ಯತೆ ಇದೆ.
ಇನ್ನೆರಡು ದಿನ ಹಗಲಿನಲ್ಲಿ ಮೋಡಕವಿದ ವಾತಾವರಣ ಇರಲಿದ್ದು, ಸಂಜೆ ಅಥವಾ ರಾತ್ರಿ ವೇಳೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯಿಂದ ಮುನ್ನೆಚ್ಚರಿಕೆ ನೀಡಿದೆ. ರಾಜ್ಯದ ದಕ್ಷಿಣ ಒಳನಾಡು, ಪಶ್ಚಿಮ ಘಟ್ಟ, ಕರಾವಳಿ ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಚೆನ್ನೈನಲ್ಲೂ ಭಾರಿ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಳೆಯನ್ನು ಎದುರಿಸಲು ಸಿದ್ಧತೆ ನಡೆಸಿರುವುದಾಗಿ ಗ್ರೇಟರ್ ಚೆನ್ನೈ ಕಾರ್ಪೊರೇಷನ್ (ಜಿಸಿಸಿ) ತಿಳಿಸಿದೆ. ಸ್ಥಳೀಯ ಪ್ರದೇಶಗಳು ಮತ್ತು ಸುರಂಗಮಾರ್ಗಗಳಿಂದ ಮಳೆ ನೀರನ್ನು ತಕ್ಷಣವೇ ಹರಿಸಲು 600ಕ್ಕೂ ಹೆಚ್ಚು ಮೋಟಾರ್ ಪಂಪ್‌ಗಳನ್ನು ಸಿದ್ಧಪಡಿಸಲಾಗಿದೆ ಎಂದು ಸುದ್ದಿ ಮೂಲಗಳು ತಿಳಿಸಿವೆ.








