ಕೋವಿಡ್ ಹೊರಟುಹೋಗಿದೆ ಅಂದುಕೊಳ್ಳಬೇಡಿ, ಕಡ್ಡಾಯವಾಗಿ ಮಾಸ್ಕ್ ಧರಿಸಿ – ಡಾ.ಕೆ. ಸುಧಾಕರ್
ಜನರು ಮಾಸ್ಕ್ ಧರಿಸುತ್ತಿಲ್ಲ. ಕೋವಿಡ್ ಹೊರಟು ಹೋಗಿದೆ ಅಂತ ಅಂದುಕೊಂಡಿದ್ದಾರೆ. ಮಾಸ್ಕ್ ಧರಿಸದಿದ್ದರೇ ದಂಡ ವಿಧಿಸುವುದಿಲ್ಲ ಆದರೆ ಜನರು ಕಡ್ಡಾಯವಾಗಿ ಮಾಸ್ಕ್ ಹಾಕಿಕೊಳ್ಳಬೇಕು ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ.
ಬೆಂಗಳೂರಿನ ಸಿ ಎಂ ಗೃಹ ಕಛೇರಿಯಲ್ಲಿ ಮಹತ್ವದ ಸಭೆ ಇದೆ. ತಾಂತ್ರಿಕ ಸಲಹಾ ಸಮಿತಿ ಸದಸ್ಯರು, ಆರೋಗ್ಯ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಇರುತ್ತಾರೆ. ನಾನು ಕೂಡಾ ಎರಡು ವಾರಗಳಿಂದ ನಮ್ಮ ಇಲಾಖೆ ಅಧಿಕಾರಿಗಳ ಜೊತೆ ಸತತವಾಗಿ ಸಂಪರ್ಕದಲ್ಲಿ ಇದ್ದೇನೆ. 4 ನೇ ಅಲೆ ಹೇಗೆ ರಿಯಾಕ್ಟ್ ಮಾಡುತ್ತದೆ. ಹೊಸ ಪ್ರಭೇಧ ಏನಾದರೂ ಇದೆಯಾ ಅಂತ ಇವತ್ತಿನ ಸಭೆಯಲ್ಲಿ ಚರ್ಚೆ ಮಾಡುತ್ತೇವೆ. ಸಭೆಯಲ್ಲಿ ಮುನ್ನೆಚ್ಚರಿಕೆ ಕ್ರಮ, 4ನೇ ಅಲೆ ಎದುರಿಸಲು ಯಾವ ಕ್ರಮ ತೆಗೆದುಕೊಳ್ಳಬೇಕು ಅಂತ ಚರ್ಚಿಸುತ್ತೇವೆ ಎಂದು ತಿಳಿಸಿದ್ದಾರೆ.
ಅನೇಕ ಜನರು ಲಸಿಕೆ ಕೂಡಾ ಪಡೆದಿಲ್ಲ. 2ನೇ ಡೋಸ್ ಪಡೆದಿಲ್ಲದವರು ಎರಡನೇ ಡೋಸ್ ಪಡೆಯಬೇಕು. ಬೂಸ್ಟರ್ ಡೋಸ್ ಕೂಡಾ ಪಡೆಯಬೇಕು. 12 ವರ್ಷ ಮೇಲ್ಪಟ್ಟ ಮಕ್ಕಳಿಗೂ ಪೋಷಕರು ಲಸಿಕೆ ಕೊಡಿಸಬೇಕು. ಆದಷ್ಟು ಬೇಗ 5 ವರ್ಷ ಮೇಲ್ಪಟ್ಟವರಿಗೂ ಲಸಿಕೆ ಬರಲಿದೆ. ಈ ಎಲ್ಲಾ ಅಂಶಗಳನ್ನು ಇವತ್ತಿನ ಸಭೆಯಲ್ಲಿ ಚರ್ಚೆ ಮಾಡುತ್ತೇವೆ. ಕೊರೊನಾ ತಡೆಗಟ್ಟಲು ಯಾವ ಕ್ರಮಕೈಗೊಳ್ಳಬೇಕು ಮತ್ತು ನಿಯಮಗಳ ಬಗ್ಗೆ ತಜ್ಞರ ಸಲಹೆ ಪಡೆಯುತ್ತೇವೆ ಎಂದಿದ್ದಾರೆ.