ಟ್ರಕ್ ಗೆ ಸಚಿವರ ಬೆಂಗಾವಲು ವಾಹನ ಡಿಕ್ಕಿ ಹೊಡೆದ ಪರಿಣಾಮ ಓರ್ವ ಪೊಲೀಸ್ ವ್ಯಕ್ತಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ನಿಲ್ಲಿಸಿದ್ದ ಟ್ರಕ್ ಗೆ ಬಿಹಾರ ಸಚಿವರ ಬೆಂಗಾವಲು ವಾಹನ ಡಿಕ್ಕಿ ಹೊಡೆದಿದೆ. ಅಲ್ಲದೇ, ಘಟನೆಯಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸಚಿವ ಜಮಾ ಖಾನ್ ಬೆಂಗಾವಲು ಪೊಲೀಸ್ ವಾಹನ ರೋಹ್ತಾಸ್ ಜಿಲ್ಲೆಯಲ್ಲಿ ನಿಂತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದಿದೆ. ರಾಣಿ ಕುಮಾರಿ, ಅರ್ಚನಾ ಕುಮಾರಿ ಮತ್ತು ಮನೋಜ್ ಕುಮಾರ್ ಮತ್ತು ರಮೇಶ್ ಕುಮಾರ್ ಸೇರಿದಂತೆ ಇಬ್ಬರು ಮಹಿಳಾ ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.