ಮಹಿಳೆಯೊಬ್ಬರು ಚಲಿಸುತ್ತಿದ್ದ ಆಂಬುಲೆನ್ಸ್ ನಲ್ಲಿಯೇ ಮಗುವಿಗೆ ಜನ್ಮ ನೀಡಿದ್ದಾರೆ.
ಈ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬೆಳಗೋಡು ಗ್ರಾಮದಲ್ಲಿ ನಡೆದಿದೆ. ಹೆರಿಗೆ ನೋವಿನಿಂದ ಬಳಲುತ್ತಿದ್ದ ಬೆಳಗೋಡು ಗ್ರಾಮದ ಮಹಿಳೆಯನ್ನು 108 ಅಂಬುಲೆನ್ಸ್ ಮೂಲಕ ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ಕರೆ ತರಲಾಗುತ್ತಿತ್ತು. ಈ ಸಂದರ್ಭದಲ್ಲಿ ಮಹಿಳೆಗೆ ನೋವು ಹೆಚ್ಚಾಗಿದೆ. ಆದರೆ, ಆಸ್ಪತ್ರೆ ತಲುಪಲು ಇನ್ನೂ ದೂರ ಇದ್ದ ಹಿನ್ನೆಲೆಯಲ್ಲಿ ಆಂಬುಲೆನ್ಸ್ ನಲ್ಲಿದ್ದ ಶುಶ್ರೂಷಕಿ ಮಂಜುಳಾ ಅಂಬುಲೆನ್ಸ್‌ನಲ್ಲೇ ಹೆರಿಗೆ ಮಾಡಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಮಹಿಳೆಯು ಗಂಡು ಮಗುವಿಗೆ ಜನ್ಮ ನೀಡಿದ್ದು, ತಾಯಿ-ಮಗು ಇಬ್ಬರೂ ಆರೋಗ್ಯವಾಗಿದ್ದಾರೆ ಎನ್ನಲಾಗಿದೆ. ಶುಶ್ರೂಷಕಿ ಮಂಜುಳಾ ಅವರ ಕಾರ್ಯಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.