ಬೆಂಗಳೂರು: ಆರ್ಥಿಕ ತೊಂದರೆಯಿಂದಾಗಿ ತನ್ನಿಬ್ಬರು ಮಕ್ಕಳನ್ನೇ ಕೊಲೆ ಮಾಡಿದ್ದ ತಾಯಿ ಜೈಲಿನಲ್ಲಿ ನೇಣಿಗೆ ಶರಣಾಗಿರುವ ಘಟನೆ ಬೆಳಕಿಗೆ ಬಂದಿದೆ.
ಪರಪ್ಪನ ಅಗ್ರಹಾರ ಸೇರಿದ್ದ ತಾಯಿ ಗಂಗಾದೇವಿ ಜೈಲಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮಂಗಳವಾರ ರಾತ್ರಿ ನಗರದ ಜಾಲಹಳ್ಳಿಯಲ್ಲಿ ತಾಯಿಯೊಬ್ಬಳು ತನ್ನಿಬ್ಬರ ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ್ದಳು. ನಂತರ 112ಕ್ಕೆ ಕರೆ ಮಾಡಿ ವಿಷಯ ತಿಳಿಸಿದ್ದಳು. ಕೂಡಲೇ ಸ್ಥಳಕ್ಕೆ ಆಗಮಿಸಿದ್ದ ಪೊಲೀಸರು ಮಹಿಳೆಯನ್ನು ಬಂಧಿಸಿದ್ದರು.
ನಂತರ ಗಂಗಾದೇವಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಗುರುವಾರ ಜೈಲಿಗೆ ಕಳುಹಿಸಲಾಗಿತ್ತು. ಆದರೆ, ಅಂದೇ ರಾತ್ರಿ ಗಂಗಾದೇವಿ ತಾನು ಉಟ್ಟಿದ್ದ ಸೀರೆಯಿಂದ ಶೌಚಾಲಯದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ. ಈ ಕುರಿತು ಪರಪ್ಪನ ಅಗ್ರಹಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.