ಶೀಘ್ರದಲ್ಲೇ ಕುಂ.ವೀರಭದ್ರಪ್ಪ ಕಥೆಯಾಧಾರಿತ ‘ಕುಬುಸ’ ಸಿನಿಮಾ ಟೀಸರ್ ಬಿಡುಗಡೆ- ರಘು ರಾಮಚರಣ್ ನಿರ್ದೇಶನದ ಚೊಚ್ಚಲ ಚಿತ್ರ
ಕುಂ.ವೀರಭದ್ರಪ್ಪ ‘ಕುಬುಸ’ ಕಥೆ ಆಧಾರಿತ ‘ಕುಬುಸ’ ಸಿನಿಮಾ ಬೆಳ್ಳಿ ತೆರೆ ಮೇಲೆ ಬರಲು ಸಜ್ಜಾಗಿದೆ. ತಾಯಿ ಮಗನ ಸೆಂಟಿಮೆಂಟ್ ಹೊತ್ತ ಈ ಚಿತ್ರ ಟೀಸರ್ ಮೂಲಕ ಪ್ರೇಕ್ಷಕರ ಮನ ತಲುಪಲು ಸಜ್ಜಾಗಿದೆ. ಶೀಘ್ರದಲ್ಲೇ ಟೀಸರ್ ಮೂಲಕ ಚಿತ್ರತಂಡ ಪ್ರೇಕ್ಷಕರನ್ನು ಎದುರು ಗೊಳ್ಳಲಿದೆ.
‘ಕುಬುಸ’ ಚಿತ್ರದ ಫಸ್ಟ್ ಲುಕ್ ಡಾಲಿ ಧನಂಜಯ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದ್ರು. ಇದೀಗ ಸಿನಿಮಾ ತಂಡ ಚಿತ್ರೀಕರಣ ಕಂಪ್ಲೀಟ್ ಮಾಡಿ ಸೆನ್ಸಾರ್ ಅಂಗಳದಲ್ಲಿದ್ದು ಟೀಸರ್ ಬಿಡುಗಡೆ ಮಾಡಲು ತಯಾರಿ ಮಾಡಿಕೊಂಡಿದೆ. ಈ ಚಿತ್ರವನ್ನು ನಿರ್ದೇಶಕ ಆರ್. ಚಂದ್ರು ಶಿಷ್ಯ ರಘು ರಾಮಚರಣ್ ಹೂವಿನ ಹಡಗಲಿ ನಿರ್ದೇಶನ ಮಾಡಿದ್ದಾರೆ. ನಿರ್ದೇಶಕರಾದ ಟಿ.ಎಸ್. ನಾಗಾಭರಣ, ಪ್ರೇಮ್, ಸತ್ಯ ಪ್ರಕಾಶ್ ಸಿನಿಮಾಗಳಲ್ಲೂ ಸಹಾಯಕ ನಿರ್ದೇಶಕನಾಗಿ, ಕಲಾವಿದನಾಗಿ ಗುರುತಿಸಿಕೊಂಡಿರುವ ಇವರು ಇದೀಗ ‘ಕುಬುಸ’ ಸಿನಿಮಾ ಮೂಲಕ ನಿರ್ದೇಶಕರಾಗಿ ಹೊರ ಹೊಮ್ಮಿದ್ದಾರೆ.
The movie ‘Kubusa’ based on the story of Kum. Veerabhadrappa ‘Kubusa’ is all set to hit the silver screen.