ಇದೀಗ ರಾಜ್ಯಕ್ಕೂ ಕಾಲಿಟ್ಟಿರುವ ಕೊರೋನಾ ವೈರಸ್ , ನಾಲ್ಕು ಜನರಲ್ಲಿ ಪತ್ತೆಯಾಗಿದ್ದು ಕರ್ನಾಟಕದಲ್ಲೂ ಆತಂಕ ಸೃಷ್ಟಿಸಿದೆ. ರಾಜ್ಯದಾದ್ಯಂತ ಕಟ್ಟುನಿಟ್ಟಿನ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಸೂಚಿಸಿರುವ ರಾಜ್ಯ ಸರಕಾರ, ಕೇರಳದ ಮಾದರಿಯಲ್ಲಿ ಕರ್ನಾಟಕದಲ್ಲೂ ಚಿತ್ರಮಂದಿರಗಳನ್ನು ಬಂದ್ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.
ಕೇರಳದಲ್ಲಿ ಮಾರ್ಚ್ 31ರವರೆಗೆ ಚಿತ್ರ ಮಂದಿರಗಳನ್ನು ಮುಚ್ಚಲು ಸರ್ಕಾರ ನಿರ್ಧರಿಸಿದ್ದು, ಕರ್ನಾಟಕದಲ್ಲೂ ಮಾರ್ಚ್ 16 ರವರೆಗೆ ಚಿತ್ರಮಂದಿರಗಳನ್ನು ಬಂದ್ ಮಾಡಲಾಗುವುದು ಎನ್ನಲಾಗುತ್ತಿದ್ದು, ಇನ್ನೊಂದು ವಾರ ಸಿನಿಮಾ ಪ್ರದರ್ಶನ ಬಂದ್ ಆಗುವ ಸಾಧ್ಯತೆ ಇದೆ ಎಂದು ಮಾಹಿತಿ ಲಭ್ಯವಾಗಿದೆ.