ಧಾರವಾಡ: ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಯುವಕನನ್ನು ಕೊಚ್ಚಿ ಕೊಲೆ ಮಾಡಿರುವ ಘಟನೆ ನಡೆದಿದೆ.
ಕೊಲೆಯಾದ ಯುವಕ ವಿದ್ಯುತ್ ಬಿಲ್ ಕಲೆಕ್ಟರ್(Electricity Bill Collector) ಆಗಿ ಕಾರ್ಯ ನಿರ್ವಹಿಸುತ್ತಿದ್ದ. ರಜಾಕ್ ಕವಲಗೇರಿ ಕೊಲೆಯಾದ ಯುವಕ. ಈ ಘಟನೆ ನಗರದ ಹೊರವಲಯದ ಹಳಿಯಾಳ ಬೈಪಾಸ್ ರಸ್ತೆಯಲ್ಲಿ ನಡೆದಿದೆ. ಬೈಕ್ಗಳ ಮೇಲೆ ಬಂದಿದ್ದ ಯುವಕರು ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ಸ್ಥಳಕ್ಕೆ ಧಾರವಾಡ ಉಪನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.