ಮೈಸೂರು : ದುಷ್ಕರ್ಮಿಗಳು ಚಾಕುವಿನಿಂದ ಇರಿದು ಯುವಕನನ್ನು ಕೊಲೆ ಮಾಡಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ನಗರದ ವಿದ್ಯಾನಗರ (Vidyanagar) ಬಡಾವಣೆಯ 4ನೇ ಕ್ರಾಸ್ ನಲ್ಲಿ ಈ ದುರ್ಘಟನೆ ನಡೆದಿದ್ದು, 26 ವರ್ಷದ ಬಾಲರಾಜ್ ಕೊಲೆಯಾದ ಯುವಕ ಎನ್ನಲಾಗಿದೆ.
ನಾಲ್ವರು ದುಷ್ಕರ್ಮಿಗಳು ಸೇರಿ ಯುವಕನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾರೆ. ಆದರೆ, ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಆದರೆ, ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಗಳಾದ ತೇಜಸ್, ಸಂಜಯ್, ಕಿರಣ್ ಹಾಗೂ ಸಾಮ್ರಾಟ್ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ನಜರ್ಬಾದ್ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ