ರಾಯಚೂರು: ತಾಯಿಗೆ ಪ್ರತಿ ದಿನ ಕಿರುಕುಳ ನೀಡುತ್ತಿದ್ದ ತಂದೆಯನ್ನು ಹತ್ಯೆ ಮಾಡಿ ಮಗ ಪೊಲೀಸರಿಗೆ ಶರಣಾಗಿರುವ ಘಟನೆ ನಡೆದಿದೆ.
ಗಾಂಜಾ, ಮದ್ಯ ಸೇವಿಸಿ ಪ್ರತಿ ದಿನ ತಾಯಿಗೆ ಕಿರುಕುಳ ನೀಡುತ್ತಿದ್ದ ತಂದೆಯನ್ನೇ ಮಗ ಹತ್ಯೆ ಮಾಡಿದ್ದಾನೆ. ಈ ಘಟನೆ ಜಿಲ್ಲೆಯ ಲಿಂಗಸುಗೂರು (Lingasuguru) ತಾಲೂಕಿನ ದೇವರಭೂಪೂರು ಗ್ರಾಮದಲ್ಲಿ ನಡೆದಿದೆ.
ಬಂಡಿ ತಿಮ್ಮಣ್ಣ (55) ಕೊಲೆಯಾಗಿರುವ ವ್ಯಕ್ತಿ. ತಂದೆಯನ್ನು ಕೊಲೆ ಮಾಡಿದ ಮಗನನ್ನು ಶೀಲವಂತ ಎನ್ನಲಾಗಿದೆ. ತಂದೆ ಪ್ರತಿ ನಿತ್ಯ ಗಾಂಜಾ, ಮದ್ಯ ಸೇವಿಸಿ ತಾಯಿಗೆ ಕಿರುಕುಳ ನೀಡುತ್ತಿದ್ದ ಎಂದು ತಂದೆಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿದ್ದಾನೆ. ನಂತರ ತಾನೇ ಪೊಲೀಸರಿಗೆ ಶರಣಾಗಿದ್ದಾನೆ.
ಮಗ ಕುಟುಂಬಸ್ಥರ ಎದುರೇ ತಂದೆಯನ್ನು ಕೊಂದು ತಪ್ಪಿಸಿಕೊಳ್ಳಲು ಪೊಲೀಸರಿಗೆ ಕರೆ ಮಾಡಿ, ಈ ಕುರಿತು ಮಾಹಿತಿ ನೀಡಿದ್ದಾನೆ. ಸ್ಥಳಕ್ಕೆ ಲಿಂಗಸುಗೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಲಿಂಗಸುಗೂರು ಪೊಲೀಸರಿಗೆ ಶರಣಾಗಿದ್ದು, ಈ ಬಗ್ಗೆ ಲಿಂಗಸುಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.