ಉತ್ತರಪ್ರದೇಶ : ಹಳೇ ವೈಷಮ್ಯದ ಹಿನ್ನೆಲೆ ಒಂದೇ ಕುಟುಂಬದ ಮೂವರನ್ನು ಗುಂಡಿಕ್ಕಿ ಕೊಲೆ ಮಾಡಿರುವ ಘಟನೆ ಉತ್ತರಪ್ರದೇಶದ ಕಾಸ್ ಗಂಜ್ ನ ಕೊಟ್ಟಾಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತ ವ್ಯಕ್ತಿಗಳ ಗುರುತು ಇನ್ನೂ ಪತ್ತೆಯಾಗಿಲ್ಲವಾದರೂ ಮೃತರು ಒಂದೇ ಕುಟುಂಬಕ್ಕೆ ಸೇರಿದವರು ಎಂದು ಸ್ಥಳೀಯರು ತಿಳಿಸಿದ್ದಾರೆ.
ಸ್ಥಳೀಯರು ಹೇಳುವ ಪ್ರಕಾರ, ನಿನ್ನೆ ಸಂಜೆ ಇದ್ದಕ್ಕಿದ್ದಂತೆ ಮನೆಗೆ ನುಗ್ಗಿದ ಕೆಲ ಅಪರಿಚಿತರು, ಕುಟುಂಬದ ಸದಸ್ಯರೊಂದಿಗೆ ವಾಗ್ವಾದ ನಡೆಸಿದ್ದಾರೆ. ಈ ವೇಳೆ ನಾಲ್ಕು ಜನರ ಮೇಲೆ ಗುಂಡು ಹಾರಿಸಿ ಪರಾರಿಯಾಗಿದ್ದಾರೆ. ಇದರಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಓರ್ವನ ಸ್ಥಿತಿ ಗಂಭೀರವಾಗಿದೆ. ಆತನನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಹಳೇ ದ್ವೇಷದ ಹಿನ್ನೆಲೆ ಕೊಲೆ ಮಾಡಲಾಗಿದೆ ಎನ್ನಲಾಗಿದೆ. ಈ ಸಂಬಂಧ ಕಾಸ್ ಗಂಜ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.








