ಮುಂದಿನ ಚುನಾವಣಾ ಜವಾಬ್ದಾರಿ ನನ್ನ ಮೇಲಿದೆ : ಯಡಿಯೂರಪ್ಪ Yeddyurappa
ನವದೆಹಲಿ : ರಾಜ್ಯದ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ನೇತೃತ್ವದಲ್ಲೇ ಬಿಜೆಪಿ ಚುನಾವಣಾ ಅಖಾಡಕ್ಕೆ ಧುಮುಕಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದಾರೆ
ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಮುಂದಿನ ಚುನಾವಣೆಯ ಜವಾಬ್ದಾರಿಯನ್ನು ಪಕ್ಷದ ಅಧ್ಯಕ್ಷರಾದ ಜೆ.ಪಿ.ನಡ್ಡಾ ನೀಡಿದ್ದಾರೆ.
ಕರ್ನಾಟಕದಲ್ಲಿ ಮತ್ತೆ ಬಿಜೆಪಿಯನ್ನು ಅಧಿಕಾರಕ್ಕೆ ತರುವಲ್ಲಿ ಕೆಲಸ ಮಾಡಬೇಕು ಎಂದು ಚುನಾವಣೆ ಜವಾಬ್ದಾರಿಯನ್ನು ನೀಡಿದರು.
ಇದೇ ಮಾತುಗಳನ್ನು ಪ್ರಧಾನಿಗಳು ನಿನ್ನೆಯ ಭೇಟಿಯಲ್ಲಿ ಹೇಳಿದ್ದರು ಎಂದರು.
ಅಧ್ಯಕ್ಷರ ಜೊತೆ ರಾಜ್ಯ ರಾಜಕೀಯ ವಿಷಯಗಳ ಚರ್ಚೆ ನಡೆಯಿತು. ಒಂದು ವೇಳೆ ರಾಜೀನಾಮೆ ಕೊಟ್ಟಿದ್ರೆ ಮುಚ್ಚಿಡುವ ಪ್ರಶ್ನೆ ಇಲ್ಲ.
ರಾಜೀನಾಮೆ ಕುರಿತ ಸುದ್ದಿಗಳಿಗೆ ಯಾವುದೇ ಬೆಲೆ ಇಲ್ಲ. ರಾಜೀನಾಮೆ ನೀಡುವೆ ಅಂತೆಯೂ ಯಾರೂ ನನಗೆ ಹೇಳಿಲ್ಲ. ಹಾಗಾಗಿ ನಾನೇ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತೇನೆ.
ಆಗಸ್ಟ್ ಮೊದಲ ವಾರದಲ್ಲಿ ಮತ್ತೆ ದೆಹಲಿ ಬಂದು, ಕೇಂದ್ರ ನಾಯಕರನ್ನು ಭೇಟಿ ಮಾಡಿ ರಾಜ್ಯದ ಅಭಿವೃದ್ಧಿ ಕೆಲಸಗಳ ಕುರಿತ ಚರ್ಚೆ ನಡೆಸುತ್ತೇನೆ ಎಂದು ತಿಳಿಸಿದರು.