ಅಂಡಮಾನ್ – ನಿಕೋಬಾರ್ : ಕೋವಿಡ್-19 ಪ್ರಕರಣಗಳ ಸಂಖ್ಯೆ 2,399 ಕ್ಕೆ ಏರಿಕೆ
ಅಂಡಮಾನ್, ಅಗಸ್ಟ್ 18: ಅಂಡಮಾನ್ ಮತ್ತು ನಿಕೋಬಾರ್ ದ್ವೀಪದಲ್ಲಿ ಇನ್ನೂ 93 ಮಂದಿಗೆ ಕೊರೋನಾ ವೈರಸ್ ಸೋಂಕು ಪತ್ತೆಯಾಗಿದ್ದು, ಒಟ್ಟು ಕೋವಿಡ್ -19 ಪ್ರಕರಣಗಳ ಸಂಖ್ಯೆ 2,399 ಕ್ಕೆ ಏರಿಕೆಯಾಗಿದೆ ಎಂದು ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.
ಸಂಪರ್ಕ ಪತ್ತೆಹಚ್ಚುವಿಕೆಯ ಸಮಯದಲ್ಲಿ ಎಲ್ಲಾ ಹೊಸ ಪ್ರಕರಣಗಳು ಪತ್ತೆಯಾಗಿವೆ ಎಂದು ಅವರು ಹೇಳಿದ್ದಾರೆ. ಒಟ್ಟು 2,399 ಕೋವಿಡ್ -19 ಪ್ರಕರಣಗಳಲ್ಲಿ 1,145 ಸಕ್ರಿಯವಾಗಿದ್ದು, 1,226 ಜನರು ಈ ಕಾಯಿಲೆಯಿಂದ ಚೇತರಿಸಿಕೊಂಡಿದ್ದಾರೆ ಮತ್ತು 28 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಕಳೆದ 24 ಗಂಟೆಗಳಲ್ಲಿ ಅಂಡಮಾನ್ ನಿಕೋಬಾರ್ ದ್ವೀಪದಲ್ಲಿ ಕೋವಿಡ್ -19 ನಿಂದ 98 ಜನರು ಚೇತರಿಸಿಕೊಂಡಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 1,226 ಕ್ಕೆ ಏರಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.