ಬೆಂಗಳೂರು : ರಾಜ್ಯದಲ್ಲಿ ಕಿಲ್ಲರ್ ಕೊರೊನಾ ವೈರಸ್ ಆರ್ಭಟ ಮುಂದುವರಿದಿದ್ದು, ಇಂದು 120 ಜನರಿಗೆ ಹೊಸದಾಗಿ ಕೊರೊನಾ ಸೋಂಕು ತಗುಲಿದೆ. ಇದರೊಂದಿಗೆ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 6 ಸಾವಿರ ದಾಟಿದ್ದು, 6041ಕ್ಕೆ ಏರಿಕೆಯಾಗಿದೆ.
ಈ ಕುರಿತಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ. ಇಂದು ಬೆಂಗಳೂರು ನಗರ – 42, ಯಾದಗಿರಿ – 27, ವಿಜಯಪುರ – 13, ಕಲಬುರ್ಗಿ -11, ಬೀದರ್ -05, ದಕ್ಷಿಣ ಕನ್ನಡ -04, ಧಾರವಾಡ -04, ದಾವಣಗೆರೆ -03, ಹಾಸನ -03, ಬಳ್ಳಾರಿ – 03, ಬಾಗಲಕೋಟೆ, ರಾಮನಗರ ತಲಾ ಎರಡು, ಬೆಳಗಾವಿ – 01 ಕೊರೊನಾ ಕೇಸ್ ಪತ್ತೆಯಾಗಿದೆ.
ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 6041ಕ್ಕೆ ಏರಿಕೆಯಾಗಿದ್ದು, ಇದರಲ್ಲಿ 2862 ಜನ ಕೊರೊನಾ ಸೋಂಕಿನಿಂದ ಗುಣಮುಖರಾಗುವ ಮೂಲಕ, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಕೊರೋನಾ ಸೋಂಕಿತ ಸಕ್ರೀಯ ಜನರ ಸಂಖ್ಯೆ 3108 ಆಗಿದೆ. ರಾಜ್ಯದಲ್ಲಿ ಇಂದು ಮೂವರು ಕೊರೊನಾಗೆ ಬಲಿಯಾಗಿದ್ದು, ಸಾವಿನ ಸಂಖ್ಯೆ 69ಕ್ಕೆ ಏರಿಕೆಯಾಗಿದೆ.
ಮೃತಪಟ್ಟವರ ವಿವರ
ಧಾರವಾಡದ 58 ವರ್ಷದ ಪುರುಷ, ಕಳೆದ ತಿಂಗಳು ಮಹಾರಾಷ್ಟ್ರದಿಂದ ವಾಪಸ್ ಆಗಿದ್ದರು. ಕೆಮ್ಮು, ಜ್ವರ ಬಳಲುತ್ತಿದ್ದ ಇವರಿಗೆ ಕೋವಿಡ್ ಟೆಸ್ಟ್ ಮಾಡಿಸಿದ್ದಾಗ ಕೊರೊನಾ ಸೋಂಕಿರುವುದು ದೃಢಪಟ್ಟಿತ್ತು.
ಬೆಂಗಳೂರಿನ 32 ವರ್ಷದ ಪುರುಷ, ಮೃತಪಟ್ಟ ಬಳಿಕ ಸೋಂಕು ದೃಢಪಟ್ಟಿದೆ. ಇನ್ನು 57 ವರ್ಷದ ಪುರುಷ, ಸೋಂಕು ದೃಢಪಟ್ಟು ಆಸ್ಪತ್ರೆಗೆ ದಾಖಲಾದ ದಿನವೇ ಸಾವು.