ನವದೆಹಲಿ : ನಿನ್ನೆಯಷ್ಟೆ 55 ಲಕ್ಷದ ಗಡಿ ದಾಟಿದ್ದ ಕೊರೊನಾ ಸೋಂಕಿತರ ಸಂಯೆ ಇಂದು 56 ಲಕ್ಷಕ್ಕೆ ಏರಿಕೆಯಾಗಿದೆ.
ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ಪ್ರಕಾರ, ದೇಶದಲ್ಲಿ ಕಳೆದ 24 ಗಂಟೆಯಲ್ಲಿ 83,347 ಮಂದಿಗೆ ಕೊರೊನಾ ಸೋಂಕಿರುವುದು ದೃಢಪಟ್ಟಿದ್ದು, 1,085 ಮಂದಿ ಹೆಮ್ಮಾರಿಗೆ ಬಲಿಯಾಗಿದ್ದಾರೆ.
ಇದರೊಂದಿಗೆ ದೇಶದ ಒಟ್ಟಾರೆ ಸೋಂಕಿತರ ಸಂಖ್ಯೆ 5,646,011ಕ್ಕೆ ಮೃತಪಟ್ಟವರ ಸಂಖ್ಯೆ 90,020ಕ್ಕೆ ಏರಿದೆ.
ಇನ್ನು ದೇಶದ ಒಟ್ಟು 5,646,011 ಮಂದಿ ಸೋಂಕಿತರ ಪೈಕಿ 45,87,614 ಮಂದಿ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ದೇಶದಲ್ಲಿನ್ನು 9,68,377 ಸಕ್ರಿಯ ಪ್ರಕರಣಗಳಿವೆ.
ದೇಶದಲ್ಲಿ ನಿನ್ನೆ ಒಂದೇ ದಿನ 9,53,683 ಮಂದಿಯನ್ನು ಕೊರೊನಾ ಟೆಸ್ಟ್ ಗೆ ಒಳಪಡಿಸಲಾಗಿದೆ. ಈ ಮೂಲಕ ಇದೂವರೆಗೂ 6,62,79,462 ಮಂದಿಗೆ ಕೋವಿಡ್ 19 ಪರೀಕ್ಷೆ ನಡೆಸಲಾಗಿದೆ.