ನವದೆಹಲಿ : ಭಾರತದಲ್ಲಿ ಕೊರೊನಾ ಸ್ಫೋಟ ಮುಂದುವರಿದಿದ್ದು, ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 97,570 ಹೊಸ ಕೇಸ್’ಗಳು ಪತ್ತೆಯಾಗಿವೆ. ಇದರೊಂದಿಗೆ ದೇಶದ ಒಟ್ಟು ಸೋಂಕಿತರ ಸಂಖ್ಯೆ 46,59,985ಕ್ಕೆ ಏರಿಕೆಯಾಗಿದೆ.
ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ಪ್ರಕಾರ, ನಿನ್ನೆ ಒಂದೇ ದಿನ 97,570 ಹೊಸ ಕೇಸ್ ಗಳು ಪತ್ತೆಯಾಗಿದ್ದರೇ ಹೆಮ್ಮಾರಿ ವೈರಸ್ 1,201 ಮಂದಿಯನ್ನು ಬಲಿಪಡೆದುಕೊಂಡಿದೆ. ಈ ಮೂಲಕ ದೇಶದ ಒಟ್ಟು ಸೋಂಕಿತರ ಸಂಖ್ಯೆ 46,59,985ಕ್ಕೆ ಸಾವಿನ ಸಂಖ್ಯೆ 77,472ಕ್ಕೆ ತಲುಪಿದೆ.
ಇನ್ನು 46,59,985 ಮಂದಿ ಸೋಂಕಿತರ ಪೈಕಿ ದೇಶದಲ್ಲಿ ಒಟ್ಟಾರೆ 36,24,197 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ. ದೇಶದಲ್ಲಿನ್ನೂ 9,58,316 ಸಕ್ರಿಯ ಪ್ರಕರಣಗಳು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
https://www.youtube.com/watch?v=I5BRabD3f5A