ನವದೆಹಲಿ : ಭಾರತದಲ್ಲಿ ಕೊರೊನಾ ಅಬ್ಬರದ ಓಟ ಮುಂದುವರಿದಿದೆ. ಹಲವು ಮುನ್ನೆಚ್ಚರಿಕಾ ಕ್ರಮಗಳ ಹೊರತಾಗಿಯೂ ದೇಶದಲ್ಲಿ ಹೆಮ್ಮಾರಿ ಆರ್ಭಟಿಸುತ್ತಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ ಈಗ 17,50,724ಕ್ಕೆ ತಲುಪಿದೆ.
ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಮಾಹಿತ ಪ್ರಕಾರ ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 54,736 ಮಂದಿಯಲ್ಲಿ ವೈರಸ್ ಪತ್ತೆಯಾಗಿದ್ದು, 853 ಮಂದಿ ಮಹಾಮಾರಿ ವೈರಸ್’ಗೆ ಬಲಿಯಾಗಿದ್ದಾರೆ. ಇದರೊಂದಿಗೆ ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 17,50,724ಕ್ಕೆ ಮತ್ತು ಈವರೆಗೂ ಸಾವನ್ನಪ್ಪಿದವರ ಸಂಖ್ಯೆ 37,364ಕ್ಕೆ ಏರಿಕೆಯಾಗಿದೆ.
ಇನ್ನು ದೇಶದ ಒಟ್ಟಾರೆ 17,50,724 ಮಂದಿ ಸೋಂಕಿತರ ಪೈಕಿ 11,45,630 ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನುಳಿದಂತೆ 5,67,730 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆ.