ಬೆಂಗಳೂರು: ಹಲವು ಮುನ್ನೆಚ್ಚರಿಕಾ ಕ್ರಮಗಳ ಹೊರತಾಗಿಯೂ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಇಂದು ರಾಜ್ಯದಲ್ಲಿ ಮತ್ತೊಂದು ಕೊರೊನಾ ಸೋಂಕು ಪ್ರಕರಣ ಪತ್ತೆಯಾಗಿದ್ದು, ಈ ಬಗ್ಗೆ ಆರೋಗ್ಯ ಸಚಿವ ಶ್ರೀರಾಮುಲು ಮಾಹಿತಿ ನೀಡಿದ್ದಾರೆ.
ಲಾಕ್ ಡೌನ್ ಆಗಿರುವ 9 ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳ ಜೊತೆ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಮತ್ತೊಂದು ಪ್ರಕರಣ ಪತ್ತೆಯಾಗಿರುವುದರ ಬಗ್ಗೆ ಅಧಿಕೃತ ಮಾಹಿತಿ ನೀಡಿದ್ರು. 
ಅಲ್ಲದೆ, ನಮ್ಮ ಸರ್ಕಾರ ಈಗಾಗಲೇ 10 ಲಕ್ಷ ಮಾಸ್ಕ್ ಖರೀದಿಸಲು ಕ್ರಮ ಕೈಗೊಂಡಿದೆ ಮತ್ತು 5 ಲಕ್ಷ ವೈಯಕ್ತಿಕ ರಕ್ಷಣಾ ಸಾಧನಗಳ ಖರೀದಿಗೆ ನಿರ್ಧರಿಸಲಾಗಿದೆ. ಆರೋಗ್ಯ ಇಲಾಖೆಯು ಯುದ್ಧೋಪಾದಿಯಲ್ಲಿ ಸೋಂಕು ತಡೆಹಿಡಿಯಲು ಕಾರ್ಯೋನ್ಮುಖವಾಗಿದೆ. ನಾಗರಿಕರು ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ವಿನಂತಿಸುತ್ತೇನೆ ಎಂದು ಜನರಲ್ಲೂ ರಾಮುಲು ಮನವಿ ಮಾಡಿದ್ದಾರೆ.









