ದೇಶದಲ್ಲಿ ಇಳಿಕೆಯಾದ ಕೊರೊನಾ ಸೋಂಕಿತರ ಸಂಖ್ಯೆ Saaksha Tv
ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 25,920 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.
ನಿನ್ನೆಗಿಂತ 4,837 ಕಡಿಮೆ ಪ್ರಕರಣಗಳು ವರದಿಯಾಗಿದ್ದು, ದಿನದ ಕೊರೊನಾ ಏರಿಕೆ ಪ್ರಮಾಣವು 2.07 ರಷ್ಟಿದ್ದು, ವಾರದ ಏರಿಕೆ ಪ್ರಮಾಣವು 2.76 ರಷ್ಟಿದೆ. ಇನ್ನೂ ಕಳೆದ 24 ಗಂಟೆಯಲ್ಲಿ 66,254 ಜನರು ಗುಣಮುಖರಾಗಿದ್ದು, ಚೇತರಿಕೆ ಪ್ರಮಾಣವು ಶೇ 98.12 ರಷ್ಟಿದೆ. ಅಲ್ಲದೇ ದೇಶದಲ್ಲಿ ಸಕ್ರೀಯ ಪ್ರಕರಣಗಳು 2,92,092 ಲಕ್ಷ ಇದ್ದು, ಸಕ್ರೀಯ ಪ್ರಕರಣಗಳ ಪ್ರಮಾಣವು ಶೇ 0.68 ರಷ್ಟಿದೆ ಎಂದು ಸಚಿವಾಲಯ ತಿಳಿಸಿದೆ.
ಕಳೆದ 24 ಗಂಟೆಯಲ್ಲಿ 492 ಜನರು ಸೋಂಕಿಗೆ ಮರಣ ಹೊಂದಿದ್ದಾರೆ. ಅಲ್ಲದೇ 12,54,893 ಲಕ್ಷ ಕೊರೊನಾ ಪರೀಕ್ಷೆ ಮಾಡಲಾಗಿದೆ. ಇಲ್ಲಿವರಗೆ ದೇಶದಲ್ಲಿ 174.64 ಕೋಟಿ ಕೊರೊನಾ ಲಸಿಕೆ ನೀಡಲಾಗಿದೆ.









