ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಆತಂಕ ಕಾಡ್ಗಿಚ್ಚಿನಂತೆ ಹಬ್ಬುತ್ತಿದ್ದು, ಇದೀಗ ಸೋಂಕಿತರ ಸಂಖ್ಯೆ 19ಕ್ಕೆ ಏರಿಕೆಯಾಗಿದೆ. ಇಂದು ಒಂದೇ ದಿನ 4 ಸೋಂಕಿತ ಪ್ರಕರಣಗಳು ದೃಢಪಟ್ಟಿವೆ.
ಈ ಕುರಿತಂತೆ ಚಿಕ್ಕಬಳ್ಳಾಪುರದಲ್ಲಿ ಸುದ್ದಿಗಾರರಿಗೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಮಾಹಿತಿ ನೀಡಿದ್ದಾರೆ. ಇಂದು ರಾಜ್ಯದಲ್ಲಿ ನಾಲ್ವರಿಗೆ ಕೊರೊನಾ ವೈರಸ್ ಸೋಂಕಿರುವುದು ದೃಢಪಟ್ಟಿದೆ. ಗೌರಿಬಿದನೂರಿನ ಒಬ್ಬರಿಗೆ ಹಾಗೂ ಬೆಂಗಳೂರಿನಲ್ಲಿ ಮೂವರಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ದೃಢ ಪಟ್ಟಿರುವುದಾಗಿ ಸುಧಾಕರ್ ಸ್ಪಷ್ಟಪಡಿಸಿದ್ದಾರೆ.
ನಿನ್ನೆ ಕೊರೊನಾ ವೈರಸ್ ಸೋಂಕು ಪೀಡಿತರ ಸಂಖ್ಯೆ ರಾಜ್ಯದಲ್ಲಿ 16ಕ್ಕೆ ತಲುಪಿತ್ತು. ಇಂದು ಈ ಸಂಖ್ಯೆ 19ಕ್ಕೆ ಏರಿಕೆಯಾಗಿದೆ.









