ದೇಶದಲ್ಲಿ ಅಲ್ಪ ಪ್ರಮಾಣದಲ್ಲಿ ಕಡಿಮೆಯಾದ ಕೊರೊನಾ ಸೋಂಕಿತರ ಸಂಖ್ಯೆ Saaksha Tv
ನವದೆಹಲಿ: ಕೊರೊನಾ ಮೂರನೇ ಅಲೆ ವೇಗವಾಗಿ ಹರಡುತ್ತಿದ್ದು, ಕಳೆದ 24 ಗಂಟೆಯಲ್ಲಿ 3,33,533 ಹೊಸ ಪ್ರಕರಣಗಳು ಪತ್ತೆಯಾಗಿವೆ. ನಿನ್ನೆಗಿಂತ 4,171 ಕಡಿಮೆ ಪ್ರಕರಣಗಳು ದಾಖಲಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಟ್ವಿಟ್ ಮಾಡಿದೆ.
ಹಾಗೇ ಪ್ರತಿದಿನದ ಏರಿಕೆ ಪ್ರಮಾಣವು ಶೇ 17.78ರಷ್ಟಿದ್ದು, ವಾರದ ಏರಿಕೆ ಪ್ರಮಾಣವು 16.87ರಷ್ಟಿದೆ. ಇನ್ನೂ ಸಕ್ರೀಯ ಪ್ರಕರಣಗಳ ಸಂಖ್ಯೆ 21,87,205 ಇದ್ದು, ಇದರ ಪ್ರತಿಶತವು ಶೇ 5.57 ರಷ್ಟಿದೆ. ಕಳೆದ 24 ಗಂಟೆಯಲ್ಲಿ 2,59,168 ಜನರು ಗುಣಮುಖರಾಗಿದ್ದಾರೆ. ಶೇ 93.18 ಪ್ರತಿಶತದಷ್ಟಿದೆ. ಮತ್ತು 525 ಜನ ಸಾವನ್ನಪ್ಪಿದ್ದಾರೆ ಎಂದು ಸಚಿವಾಲಯ ತಿಳಿಸಿದೆ.
ಇನ್ನೂ ಕಳೆದ 24 ಗಂಟೆಯಲ್ಲಿ 18,75,533 ಜನರಿಗೆ ಪರೀಕ್ಷಿಸಲಾಗಿದೆ. 161.92 ಕೋಟಿ ಕೊರೊನಾ ಲಸಿಕೆ ನೀಡಲಾಗಿದೆ ಎಂದು ಹೇಳಿದೆ.








