ದೇಶದಲ್ಲಿ ತಗ್ಗಿದ ಕೊರೊನಾ ಸೋಂಕಿತರ ಸಂಖ್ಯೆ Saaksha Tv
ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ ಹೊಸದಾಗಿ 1,07,474 ಲಕ್ಷ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಟ್ವೀಟ್ ಮಾಡಿದೆ.
ದಿನದ ಏರಿಕೆ ಪ್ರಮಾಣವು 7.42 ರಷ್ಟಿದ್ದು, ವಾರದ ಏರಿಕೆ ಪ್ರಮಾಣವು 10.20ರಷ್ಟಿದೆ. ನಿನ್ನೆಗಿಂತ ಶೇ 16 ಪ್ರತಿಶತದಷ್ಟು ಇಳಿಕೆಯಾಗಿದೆ. ಇನ್ನೂ ಸಕ್ರೀಯ ಪ್ರಕರಣಗಳು 12,25,011 ಲಕ್ಷ ಇದ್ದು, ಇದರ ಪ್ರಮಾಣವು 2.90 ರಷ್ಟಿದೆ. ಅಲ್ಲದೇ ಕಳೆದ 24 ಗಂಟೆಯಲ್ಲಿ 2,13, 246 ಲಕ್ಷ ಜನರು ಚೇರಿಸಿಕೊಂಡಿದ್ದಾರೆ ಎಂದು ಸಚಿವಾಲಯ ತಿಳಿಸಿದೆ.
ಚೇತರಿಕೆ ಪ್ರಮಾಣವು ಶೇ 95.91 ರಷ್ಟಿದೆ. ಕಳೆದ 24 ಗಂಟೆಯಲ್ಲಿ 865 ಜನರು ಕರೊನಾದಿಂದ ಸಾವನ್ನಪ್ಪಿದ್ದಾರೆ. ಕಳೆದ 24 ಗಂಟೆಯಲ್ಲಿ 14,48,513 ಜನರಿಗೆ ಕೊರೊನಾ ಪರೀಕ್ಷೆ ಮಾಡಲಾಗಿದ್ದು, ದೇಶದಲ್ಲಿ ಇಲ್ಲಿಯವರಗೆ 169.46 ಕೋಟಿ ಕೊರೊನಾ ಲಸಿಕೆ ನೀಡಲಾಗಿದೆ ಎಂದು ಹೇಳಿದೆ.