ನವದೆಹಲಿ : ಭಾರತದಲ್ಲಿ ಕೊರೊನಾ ವೈರಸ್ ಸೋಂಕಿನ ಆರ್ಭಟ ಮುಂದುವರಿದಿದ್ದು, ಇದೀಗ ಸೋಂಕಿತರ ಸಂಖ್ಯೆ 55 ಲಕ್ಷದ ಗಡಿ ದಾಟಿದೆ.
ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ಪ್ರಕಾರ, ಕಳೆದ 24 ಗಂಟೆಯಲ್ಲಿ 75,083 ಮಂದಿಯಲ್ಲಿ ಕೋವಿಡ್ 19 ಸೋಂಕು ಕಾಣಿಸಿಕೊಂಡಿದೆ.
ಒಂದೇ ದಿನ 1,053 ಮಂದಿ ಕೊರೊನಾ ವೈರಸ್ ಗೆ ಬಲಿಯಾಗಿದ್ದಾರೆ. ಇದರೊಂದಿಗೆ ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 55,62,664ಕ್ಕೆ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 88,935 ಕ್ಕೆ ಏರಿಕೆಯಾಗಿದೆ.
ಇನ್ನು ದೇಶದ ಒಟ್ಟು 55, 62,664 ಸೋಂಕಿತರ ಪೈಕಿ ಸದ್ಯ 9,75,861 ಸಕ್ರಿಯ ಪ್ರಕರಣಗಳಿದ್ದು, 44,97,868 ಮಂದಿ ಈಗಾಗಲೇ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.
ದೇಶದಲ್ಲಿ ನಿನ್ನೆ ಒಂದೇ ದಿನ 9,33,185 ಮಂದಿಯನ್ನು ಕೊರೊನಾ ಟೆಸ್ಟ್ ಗೆ ಒಳಪಡಿಸಲಾಗಿದೆ. ಈ ಮೂಲಕ ಇದೂವರೆಗೂ 6,53,25,779 ಮಂದಿಗೆ ಕೋವಿಡ್ 19 ಪರೀಕ್ಷೆ ನಡೆಸಲಾಗಿದೆ ಎಂದು ಐಸಿಎಂಆರ್ ತಿಳಿಸಿದೆ.