ನವದೆಹಲಿ : ದೇಶದಲ್ಲಿ ಹೆಮ್ಮಾರಿ ಕೊರೊನಾ ವೈರಸ್ ನ ಅಟ್ಟಹಾಸ ಮುಂದುವರಿದಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 31 ಲಕ್ಷದ ಗಡಿ ದಾಟಿದೆ.
ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ಪ್ರಕಾರ, ಕಳೆದ 24 ಗಂಟೆಯಲ್ಲಿ 60,975 ಮಂದಿಯಲ್ಲಿ ಹೊಸದಾಗಿ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, 848 ಮಂದಿ ಚೀನಿ ವೈರಸ್ ಗೆ ಬಲಿಯಾಗಿದ್ದಾರೆ. ಈ ಮೂಲಕ ಒಟ್ಟಾರೆ ಸೋಂಕಿತರ ಸಂಖ್ಯೆ 31,67,324ಕ್ಕೆ, ಮೃತರ ಸಂಖ್ಯೆ 58,390ಕ್ಕೆ ಏರಿದೆ.
ಒಟ್ಟು 31,67,324 ಸೋಂಕಿತರಲ್ಲಿ 7,04,348 ಸಕ್ರಿಯ ಪ್ರಕರಣಗಳಿದ್ದು, 24,04,585 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ದೇಶದಲ್ಲಿ ನಿನ್ನೆ ಒಂದೇ ದಿನ 9,25,383 ಮಂದಿಯನ್ನು ಕೊರೊನಾ ಟೆಸ್ಟ್ ಗೆ ಒಳಪಡಿಸಲಾಗಿದೆ.









