ನವದೆಹಲಿ : ಭಾರತದಲ್ಲಿ ಚೀನಿ ವೈರಸ್ ಕೊರೊನಾ ಅಬ್ಬರ ಮುಂದುವರಿದಿದ್ದು, ಇದೀಗ ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 25,26,193ಕ್ಕೆ ಏರಿಕೆಯಾಗಿದೆ. ಕೇಂದ್ರ ಆರೊಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ಪ್ರಕಾರ, ಕಳೆದ 24 ಗಂಟೇಲಿ 65,002 ಮಂದಿಯಲ್ಲಿ ಹೊಸದಾಗಿ ಸೋಂಕು ಕಾಣಿಸಿಕೊಂಡಿದೆ. 996 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ದೇಶದಲ್ಲಿ ಸೋಂಕಿತರ ಸಂಖ್ಯೆ 25,26,193ಕ್ಕೆ, ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 49,036ಕ್ಕೆ ತಲುಪಿದೆ.
ಇನ್ನು ದೇಶದ ಒಟ್ಟು 25,26,193 ಸೋಂಕಿತರ ಪೈಕಿ 6,68,220 ಸಕ್ರಿಯ ಪ್ರಕರಣಗಳಿದ್ದು, 18,08,937 ಮಂದಿ ಕೊರೊನಾ ವೈರಸ್ ಗೆದ್ದು ಡಿಸ್ಚಾರ್ಜ್ ಆಗಿದ್ದಾರೆ. ಇದೂವರೆಗೂ ದೇಶದಲ್ಲಿ 49,036 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ.








