ನವದೆಹಲಿ : ಭಾರತದಲ್ಲಿ ಕೊರೊನಾ ಸೋಂಕಿನ ಆರ್ಭಟ ಮುಂದುವರಿದಿದ್ದು, ಇದೀಗ ಒಟ್ಟಾರೆ ಸೋಂಕಿತರ ಸಂಖ್ಯೆ 27,02,743ಕ್ಕೆ ಬಂದು ನಿಂತಿದೆ.
ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ದೇಶದಲ್ಲಿ ಕಳೆದ 24 ಗಂಟೆಯಲ್ಲಿ 55,079 ಹೊಸ ಪ್ರಕರಣಗಳು ವರದಿಯಾಗಿದ್ದು, 876 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 27,02,743ಕ್ಕೆ ಸೋಂಕಿನಿಂದ ಸಾವನ್ನಪ್ಪಿದವರ ಸಂಖ್ಯೆ 51,797ಕ್ಕೆ ಏರಿಕೆಯಾಗಿದೆ.
ದೇಶದ ಒಟ್ಟು 27,02,743 ಕೊರೊನಾ ಸೋಂಕಿತರ ಪೈಕಿ ಸದ್ಯ 6,73,166 ಸಕ್ರಿಯ ಪ್ರಕರಣಗಳಿದ್ದು, 19,77,780 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು ಕಳೆದ 24 ಗಂಟೇಲಿ 8,99,864 ಜನರು ಕೋವಿಡ್ ಪರೀಕ್ಷೆಗೆ ಒಳಗಾಗಿದ್ದಾರೆ. ಇದುವರೆಗೂ ಭಾರತದಲ್ಲಿ 3,09,41,964 ಜನರು ಕೊರೊನಾ ಪರೀಕ್ಷೆಗೆ ಒಳಪಟ್ಟಿದ್ದಾರೆ.









