ನವದೆಹಲಿ : ಭಾರತದಲ್ಲಿ ಕೊರೊನಾ ವೈರಸ್ ಸಿಕ್ಕ ಸಿಕ್ಕ ದೇಹಹೊಕ್ಕಿ ಮರಣ ಮೃದಂಗ ಬಾರಿಸುತ್ತ ಸಾಗಿದ್ದು, ಇದೀಗ ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 21 ಲಕ್ಷ ದಾಟಿದೆ.
ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ಪ್ರಕಾರ, ಕಳೆದ 24 ಗಂಟೆಗಳಲ್ಲಿ ಈವರೆಗೆ ಅತಿ ಹೆಚ್ಚು ಪ್ರಕರಣಗಳು ಎಂಬಂತೆ ಬರೋಬ್ಬರಿ 64,399 ಸೋಂಕಿತರು ಪತ್ತೆಯಾಗಿದ್ದು, 861 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 21,53,011ಕ್ಕೆ ಹಾಗೂ ಮೃತರ ಸಂಖ್ಯೆ 43,379ಕ್ಕೆ ಏರಿಕೆಯಾಗಿದೆ.
ದೇಶದ ಒಟ್ಟು 21,53,011 ಸೋಂಕಿತರ ಪೈಕಿ ಶೇ.68.32 ರಷ್ಟು ಅಂದರೆ 14,80,885 ಮಂದಿ ಗುಣಮುಖರಾಗಿ, ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿದ್ದಾರೆ. ಇನ್ನುಳಿದಂತೆ 6,28,747 ಕೇಸ್ ಗಳು ಸಕ್ರಿಯವಾಗಿವೆ.








