ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 297 ಜನರಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಬೆಂಗಳೂರಿನಲ್ಲಿ ಹೆಚ್ಚು ದಾಖಲಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಕಳೆದ 24 ಗಂಟೆಗಳಲ್ಲಿ 171 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಈ ಮೂಲಕ ರಾಜ್ಯದಲ್ಲಿ ಸಕ್ರಿಯ ಕೇಸ್ ಗಳ ಸಂಖ್ಯೆ 1,136 ಇದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಬೆಂಗಳೂರು ಹೊರತು ಪಡಿಸಿದರೆ ಇನ್ನುಳಿದಂತೆ ಬಾಗಲಕೋಟೆ 5, ಬಳ್ಳಾರಿ 6, ಬೆಂಗಳೂರು ಗ್ರಾಮಾಂತರ 12, ಚಾಮರಾಜನಗರ 2, ಚಿಕ್ಕಬಳ್ಳಾಪುರ 5, ಚಿತ್ರದುರ್ಗ 5, ದಕ್ಷಿಣ ಕನ್ನಡ 6, ದಾವಣಗೆರೆ 1, ಧಾರವಾಡ 8, ಗದಗ 2, ಹಾವೇರಿ 4, ಕಲಬುರಗಿ 5, ಕೊಡಗು 1, ಕೋಲಾರ 3, ಕೊಪ್ಪಳ 8, ಮಂಡ್ಯ 6, ಮೈಸೂರು 26, ರಾಯಚೂರು 2, ರಾಮನಗರ 6, ಶಿವಮೊಗ್ಗ 4 , ತುಮಕೂರು 4, ವಿಜಯನಗರ 4, ವಿಜಯಪುರದಲ್ಲಿ 1 ಕೇಸ್ ದಾಖಲಾಗಿವೆ.







