ನವದೆಹಲಿ : ಭಾರತದಲ್ಲಿ ಕೊರೊನಾಸುರನ ಆರ್ಭಟ ಮುಂದುವರಿದಿದ್ದು, ಇದೀಗ ಸೋಂಕಿತರ ಸಂಖ್ಯೆ 13 ಲಕ್ಷದ ಗಡಿದಾಟಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಪ್ರಕಾರ ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 48,916 ಮಂದಿಯಲ್ಲಿ ವೈರಸ್ ಪತ್ತೆಯಾಗಿದೆ. ಇದರೊಂದಿಗೆ, ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 13,36,861ಕ್ಕೆ ಏರಿಕೆಯಾಗಿದೆ. ಏತನ್ಮಧ್ಯೆ ಹೆಮ್ಮಾರಿ ಸೋಂಕಿಗೆ ಒಂದೇ ದಿನ 757 ಮಂದಿ ಬಲಿಯಾಗಿದ್ದು, ಸಾವಿನ ಸಂಖ್ಯೆ ಕೂಡ 31,358 ಏರಿಕೆಯಾಗಿದೆ.
ಇನ್ನು ದೇಶದ ಒಟ್ಟು 13,36,861 ಮಂದಿ ಸೋಂಕಿತರ ಪೈಕಿ 8,49,431 ಮಂದಿ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದು, ಪ್ರಸ್ತುತ ಇನ್ನೂ ದೇಶದಲ್ಲಿ 4,56,071 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆ.








