ನವದೆಹಲಿ : ಭಾರತದಲ್ಲಿ ಕಿಲ್ಲರ್ ಕೊರೊನಾ ವೈರಸ್ ಸೋಂಕಿನ ಆರ್ಭಟ ಮುಂದುವರಿದಿದ್ದು, ಒಟ್ಟು ಸೋಂಕಿತರ ಸಂಖ್ಯೆ 24,61,191ಕ್ಕೆ ಏರಿಕೆಯಾಗಿದೆ.
ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ಪ್ರಕಾರ, ಕಳೆದ 24 ಗಂಟೆಗಳಲ್ಲಿ 64,553 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಇದೇ ವೇಳೆ ಕೊರೊನಾಗೆ ದೇಶದಲ್ಲಿ 1007 ಮಂದಿ ಬಲಿಯಾಗಿದ್ದು, 3ನೇ ಬಾರಿ ಕೊರೊನಾ ದೈನಂದಿನ ಮರಣ ಸಂಖ್ಯೆ 1 ಸಾವಿರ ಗಡಿ ದಾಟಿದೆ. ಇದರೊಂದಿಗೆ ಭಾರತದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 24,61,191ಕ್ಕೆ ಏರಿಕೆಯಾಗಿದ್ದು, ಮೃತರ ಸಂಖ್ಯೆ 48,040ಕ್ಕೆ ತಲುಪಿದ್ದು, 50 ಸಾವಿರದತ್ತ ಸಾಗುತ್ತಿದೆ.
ಇನ್ನು ದೇಶದ 24,61,191 ಮಂದಿ ಸೋಂಕಿತರ ಪೈಕಿ ಈ ವರೆಗೂ 17,51,556 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ. ಇನ್ನೂ 6,61,595 ಸಕ್ರಿಯ ಪ್ರಕರಣಗಳು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.








