24 ಗಂಟೆಯಲ್ಲಿ 18,522 ಹೊಸ ಕೇಸ್ : ದೇಶದಲ್ಲಿ ಸೋಂಕಿತರ ಸಂಖ್ಯೆ 5,66,840ಕ್ಕೆ ಏರಿಕೆ

ನವದೆಹಲಿ : ಭಾರತದಲ್ಲಿ ಕೊರೊನಾ ಆರ್ಭಟ ಮುಂದುವರಿದಿದ್ದು, ಕಳೆದ 24 ಗಂಟೆಯಲ್ಲಿ ಒಟ್ಟು 18,522 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 5,66,840 ಆಗಿದೆ ಎಂದು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.

ಕಳೆದ 24 ಗಂಟೆಯೊಳಗೆ 418 ಜನರು ಕೋವಿಡ್ ಗೆ ಬಲಿಯಾಗಿದ್ದು, ಒಟ್ಟು ಮೃತಪಟ್ಟವರ ಸಂಖ್ಯೆ, 16,893 ಆಗಿದೆ. 24 ಗಂಟೆಯ ಅವಧಿಯಲ್ಲಿ ಒಟ್ಟು 13,099 ಮಂದಿ ಗುಣ ಮುಖರಾಗಿದ್ದಾರೆ. ಸದ್ಯ ದೇಶದಲ್ಲಿ 2,15,125 ಸಕ್ರಿಯ ಪ್ರಕರಣಗಳಿದ್ದು, ಇದುವರೆಗೆ 3,34,821 ಮಂದಿ ಗುಣಮುಖರಾಗಿದ್ದಾರೆ.

ಸದ್ಯ ಸಕ್ರಿಯ ಪ್ರಕರಣಗಳಿಗಿಂತ 1,19,696 ಹೆಚ್ಚು ಜನ ಚೇತರಿಸಿಕೊಂಡಿದ್ದಾರೆ. ಇದರಿಂದಾಗಿ ಚೇತರಿಕೆ ಪ್ರಮಾಣ ಏರಿಕೆಯಾಗಿದ್ದು, ಶೇ. 59.07 ಆಗಿದೆ.

ಮಹಾರಾಷ್ಟ್ರದಲ್ಲಿ ಹೆಚ್ಚು ಕೊರೊನಾ ಕೇಸ್ ಗಳು ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 1,74,761 ಆಗಿದೆ. ಹೀಗಾಗಿ ಮುನ್ನೆಚ್ಚರಿಕೆ ಕ್ರಮವಾಗಿ ಸರ್ಕಾರ ಜುಲೈ 31 ರವರೆಗೆ ಲಾಕ್ ಡೌನ್ ವಿಸ್ತರಿಸಿದೆ.

ತಮಿಳುನಾಡಿನಲ್ಲಿ ಮಂಗಳವಾರ 3,943 ಹೊಸ ಪ್ರಕರಣಗಳು ದಾಖಲಾಗಿದ್ದು, 60 ಮಂದಿ ಮೃತಪಟ್ಟಿದ್ದಾರೆ. ಇಲ್ಲಿ ಒಟ್ಟು ಸೋಂಕಿತರ ಸಂಖ್ಯೆ 90,167 ಆಗಿದೆ. ರಾಜಧಾನಿ ದೆಹಲಿಯಲ್ಲಿ ಒಟ್ಟು 87,360 ಕೊರೊನಾ ಕೇಸ್ ಗಳು ದೃಢಪಟ್ಟಿವೆ. ಸದ್ಯ 26,270 ಸಕ್ರಿಯ ಪ್ರಕರಣಗಳಿದ್ದು, 58,348 ಮಂದಿ ಗುಣಮುಖರಾಗಿದ್ದಾರೆ. ಇದುವರೆಗೆ 2,742 ಮಂದಿ ಮೃತಪಟ್ಟಿದ್ದಾರೆ.

Leave a Reply

Your email address will not be published. Required fields are marked *

Recent Posts

YOU MUST READ

Pin It on Pinterest

Share This