ನವದೆಹಲಿ : ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕಡಿಮೆ ಆಗುವ ಲಕ್ಷಣಗಳೇ ಕಾಣುತ್ತಿಲ್ಲ. ಹಲವು ಮುನ್ನೆಚ್ಚರಿಕಾ ಕ್ರಮಗಳ ಹೊರತಾಗಿವೂ ದೇಶದಲ್ಲಿ ಹೆಮ್ಮಾರಿ ಸೋಂಕು ತನ್ನ ಕಬಂದಬಾಹುಗಳನ್ನು ಚಾಚುತ್ತಲೇ ಇದ್ದು, ಇದೀಗ ಒಟ್ಟಾರೆ ಸೋಂಕಿತರ ಸಂಖ್ಯೆ 26,47,664ಕ್ಕೆ ಬಂದು ನಿಂತಿದೆ.
ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ಪ್ರಕಾರ, ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 57,982 ಹೊಸ ಪ್ರಕರಣಗಳು ದಾಖಲಾಗಿವೆ ಹಾಗೂ ಇದೇ ಅವಧಿಯಲ್ಲಿ 941 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ಇದರೊಂದಿಗೆ ಒಟ್ಟಾರೆ ಸೋಂಕಿತರ ಸಂಖ್ಯೆ 26,47,664ಕ್ಕೆ ಹಾಗೂ ಮೃತರ ಸಂಖ್ಯೆ 50,921ಕ್ಕೆ ಏರಿಕೆ ಆಗಿದೆ.
ಒಟ್ಟು 26,47,664 ಕೊರೊನಾ ವೈರಸ್ ಸೋಂಕಿತರ ಪೈಕಿ ಈವರೆಗೂ 19,19,843 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಭಾರತದಲ್ಲಿ ಪ್ರಸ್ತುತ 6,76,900 ಸಕ್ರಿಯ ಪ್ರಕರಣಗಳಿವೆ.