ಚಿಕ್ಕಬಳ್ಳಾಪುರ: ವಿದ್ಯಾರ್ಥಿನಿ ಚುಡಾಯಿಸಿದ ಯುವಕನಿಗೆ ಸಾರ್ವಜನಿಕರು ಧರ್ಮದೇಟು ನೀಡಿರುವ ಘಟನೆ ನಡೆದಿದೆ.
ಈ ಘಟನೆ ನಗದ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದಲ್ಲಿ ನಡೆದಿದೆ. ಪ್ರೌಢಶಾಲೆ ವಿದ್ಯಾರ್ಥಿನಿಯನ್ನು ಚುಡಾಯಿಸಿದ ಆರೋಪ ಕೇಳಿ ಬಂದಿದ್ದು, ಪಿಯು ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಗೆ ಸಾರ್ವಜನಿಕರು ಧರ್ಮದೇಟು ನೀಡಿದ್ದಾರೆ.
9ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿನಿಯನ್ನು ಪಿಯುಸಿ ಓದುತ್ತಿದ್ದ ವಿದ್ಯಾರ್ಥಿ ಚುಡಾಯಿಸಿದ್ದಾನೆ. ಇದರಿಂದಾಗಿ ಕೆರಳಿದ ಸಾರ್ವಜನಿಕರು ಆತನನ್ನು ಥಳಿಸಿದ್ದಾರೆ. ಶಿಕ್ಷಕ ಮಹಂತೇಶ್ ಎಂಬುವವರು ಕೂಡ ವಿದ್ಯಾರ್ಥಿಯನ್ನು ಥಳಿಸಿದ್ದಾರೆ ಎನ್ನಲಾಗಿದೆ.