ಬೆಂಗಳೂರು : ಮಾಜಿ ಶಾಸಕ ಮುನಿರತ್ನ ವಿರುದ್ಧ ಆರ್ ಆರ್ ನಗರದ ಬಿಜೆಪಿ ಕಾರ್ಯಕರ್ತರು ತಿರುಗಿ ಬಿದ್ದಿದ್ದಾರೆ. ಮುನಿರತ್ನ ವಿರುದ್ಧ ನಿನ್ನೆ ರಾತ್ರಿ ಮೂಲ ಬಿಜೆಪಿ ಕಾರ್ಯಕರ್ತರು ಆರ್ ಆರ್ ನಗರ ಪೊಲೀಸ್ ಠಾಣೆ ಮುಂಭಾಗ ಪ್ರತಿಭಟನೆ ನಡೆಸಿದ್ದಾರೆ.
ಇತ್ತೀಚೆಗೆ ಮುನಿರತ್ನ ಅವರು ಕೊರೊನಾ ಸೋಂಕಿಗೆ ತುತ್ತಾಗಿದ್ದರು. ಈ ವಿಚಾರವನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದರು. ಇದಕ್ಕೆ ಬಿಜೆಪಿ ಕಾರ್ಯಕರ್ತ ಬದ್ರಿನಾಥ್ ಎಂಬೋರು ಕಮೆಂಟ್ ಮಾಡಿ ಪರೋಕ್ಷವಾಗಿ ಟಾಂಗ್ ನೀಡಿದ್ದರು. ಈ ಕಾರಣ ಆರ್ ಆರ್ ನಗರ ಪೊಲೀಸರು ನಿನ್ನೆ ಬದ್ರಿನಾಥ್ ಮೇಲೆ ಎಫ್ ಐಆರ್ ದಾಖಲಿಸಿ ಬಂಧಿಸಿದ್ದರು. ಇದರಿಂದ ಕೋಪಗೊಂಡ ನೂರಾರು ಮೂಲ ಬಿಜೆಪಿ ಕಾರ್ಯಕರ್ತರು ಮುನಿರತ್ನ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.
ಪ್ರತಿಭಟನೆ ಹೊಣೆ ಹೊತ್ತ ತುಳಸಿ ಮುನಿರಾಜ್ ಮಾತನಾಡಿ, ಅನರ್ಹ ಶಾಸಕನ ಹಗರಣವನ್ನು ಹೊರ ತರುವ ವಿಚಾರದ ಬಗ್ಗೆ ಫೇಸ್ ಬುಕ್ ನಲ್ಲಿ ಬರೆದಿದ್ದಾರೆ. ಈ ಕಾರಣಕ್ಕೆ ಹಿರಿಯ ನಾಗರಿಕ ಎಂಬ ವಿಚಾರವನ್ನು ಗಮನಿಸದೆ ಬಂಧಿಸಿದ್ದಾರೆ. ಬದ್ರಿನಾಥ್ ಕಾಮೆಂಟ್ ಮಾಡಿದ್ದಕ್ಕೆ ಮಾಜಿ ಶಾಸಕ ಮುನಿರತ್ನ ಅಭಿಮಾನಿಯೊಬ್ಬ ಬೆದರಿಕೆ ಕರೆ ಮಾಡಿದ್ದಾನೆ. ಈ ಸಂಬಂಧ ಯಾವುದೇ ಕ್ರಮ ಕೈಗೊಂಡಿಲ್ಲ. ಬದ್ರಿನಾಥ್ ಅವರನ್ನು ಬಿಡುಗಡೆ ಮಾಡಬೇಕು. ಇಲ್ಲವಾದಲ್ಲಿ ಮುಂದಿನ ದಿನದಲ್ಲಿ ಉಗ್ರ ಹೋರಾಟ ನಡೆಸುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.
ಕೇರಳ ಮತ್ತು ಕೊಳ್ಳೇಗಾಲದ ಮಹಾ ವಶೀಕರಣ ಮಾಂತ್ರಿಕರು ಮತ್ತು ತಾಂತ್ರಿಕರು ಪಂಡಿತ್ ಸಂತೋಷ್ ಆಚಾರ್ಯ ಗುರೂಜಿ
ಇವರು ನಿಮ್ಮ ಸಮಸ್ಯೆಗಳಾದ ವಶೀಕರಣ, ವಿವಾಹ, ಸಂತಾನ, ಪ್ರೀತಿ ಪ್ರೇಮದಲ್ಲಿ ನಂಬಿ ಮೋಸ ಹೋಗಿದ್ರೆ, ಇಷ್ಟ ಪಟ್ಟ ಪುರುಷ ಮತ್ತು ಸ್ತ್ರಿ ನಿಮ್ಮ ವಶ ಆಗಬೇಕಾದರೆ ಮತ್ತು ಲೈಂಗಿಕ ಸಮಸ್ಯೆ, ಸಾಲಬಾಧೆ, ಗುಪ್ತ ಸಮಸ್ಯೆಗಳಿಗೆ ಕೇರಳದ ಭದ್ರಕಾಳಿ ದೇವಿ ಶಕ್ತಿಯಿಂದ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.
ದೂರವಾಣಿ ಸಂಖ್ಯೆ 9901005534
ಕರೆ ಅಥವಾ ವಾಟ್ಸಾಪ್ ಮಾಡಿ ನಿಮ್ಮ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಿ.









