ADVERTISEMENT
Saturday, March 28, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಸರ್ಕಾರಿ ಆಸ್ಪತ್ರೆ ಬಗ್ಗೆ ಜನರ ಮನೋಭಾವನೆ ಬದಲಿಸಿ : ನೂತನ ಸರ್ಕಾರಿ ವೈದ್ಯರಿಗೆ ಆರೋಗ್ಯ  ಸಚಿವ ಡಾ.ಕೆ.ಸುಧಾಕರ್ ಕರೆ

admin by admin
June 2, 2021
in Newsbeat, State, ರಾಜ್ಯ
dr sudhakar saakshatv bengaluru
Share on FacebookShare on TwitterShare on WhatsappShare on Telegram

ಸರ್ಕಾರಿ ಆಸ್ಪತ್ರೆ ಬಗ್ಗೆ ಜನರ ಮನೋಭಾವನೆ ಬದಲಿಸಿ : ನೂತನ ಸರ್ಕಾರಿ ವೈದ್ಯರಿಗೆ ಆರೋಗ್ಯ  ಸಚಿವ ಡಾ.ಕೆ.ಸುಧಾಕರ್ ಕರೆ

dr sudhakar saakshatv bengaluruಬೆಂಗಳೂರು, ಸರ್ಕಾರಿ ಆಸ್ಪತ್ರೆಗಳಲ್ಲಿ ವಿಶ್ವದರ್ಜೆಯ ಆರೋಗ್ಯ ಸೇವೆ ದೊರೆಯುವ ಮಟ್ಟಿಗೆ ಕೆಲಸ ಮಾಡಿ, ಸರ್ಕಾರಿ ಆಸ್ಪತ್ರೆಗಳ ಬಗೆಗಿನ ಜನರ ಮನೋಧೋರಣೆ ಬದಲಿಸಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೊಸ ವೈದ್ಯರಿಗೆ ಕರೆ ನೀಡಿದರು.

Related posts

ಗಗನಕ್ಕೇರಿದ ಇಂಧನ ದರ: ಪೆಟ್ರೋಲ್ ಡೀಸೆಲ್ ಮೇಲಿನ ತೆರಿಗೆ ಕಡಿತಗೊಳಿಸಲು ರಾಜ್ಯ ಸರ್ಕಾರದ ಮೇಲೆ ಹೆಚ್ಚಿದ ಜನಾಕ್ರೋಶ

ಗಗನಕ್ಕೇರಿದ ಇಂಧನ ದರ: ಪೆಟ್ರೋಲ್ ಡೀಸೆಲ್ ಮೇಲಿನ ತೆರಿಗೆ ಕಡಿತಗೊಳಿಸಲು ರಾಜ್ಯ ಸರ್ಕಾರದ ಮೇಲೆ ಹೆಚ್ಚಿದ ಜನಾಕ್ರೋಶ

March 28, 2026
115 ರೂಪಾಯಿ ಪೊಂಗಲ್ ತರಿಸಲು 273 ರೂಪಾಯಿ ಪಾವತಿ: ಸ್ವಿಗ್ಗಿ ದರದ ವಿರುದ್ಧ ಸುಮಲತಾ ಅಂಬರೀಶ್ ಕೆಂಡಾಮಂಡಲ

115 ರೂಪಾಯಿ ಪೊಂಗಲ್ ತರಿಸಲು 273 ರೂಪಾಯಿ ಪಾವತಿ: ಸ್ವಿಗ್ಗಿ ದರದ ವಿರುದ್ಧ ಸುಮಲತಾ ಅಂಬರೀಶ್ ಕೆಂಡಾಮಂಡಲ

March 28, 2026

ಆರೋಗ್ಯ ಇಲಾಖೆಯಿಂದ 715 ಹಿರಿಯ ತಜ್ಞರು, 1,048 ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳು ಸೇರಿದಂತೆ ಒಟ್ಟು 1,763 ವೈದ್ಯರ ನೇಮಕ ಪೂರ್ಣಗೊಂಡಿದ್ದು, ನೂತನ ವೈದ್ಯರನ್ನು ಉದ್ದೇಶಿಸಿ, ಆನ್ ಲೈನ್ ಕಾರ್ಯಕ್ರಮದಲ್ಲಿ ಸಚಿವರು ಮಾತನಾಡಿದರು.

ಕೋವಿಡ್ ಆರ್ಥಿಕ ಸಂಕಷ್ಟದ ನಡುವೆ ಐತಿಹಾಸಿಕ ರೀತಿಯಲ್ಲಿ ರಾಜ್ಯ ಸರ್ಕಾರವು ಕೇವಲ ಐದಾರು ತಿಂಗಳಲ್ಲಿ ವೈದ್ಯರ ನೇರ ನೇಮಕ ಮಾಡಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಸಿಗುವ ಗುಣಮಟ್ಟದ ಸೇವೆ ಸರ್ಕಾರಿ ಆಸ್ಪತ್ರೆಗಳಲ್ಲಿ ಸಿಗುವುದಿಲ್ಲ ಎಂಬ ಭಾವನೆ ಜನರಲ್ಲಿದೆ. ಆದರೆ ವಾಸ್ತವವಾಗಿ ಸರ್ಕಾರಿ ಆಸ್ಪತ್ರೆಗಳಲ್ಲಿ ಬಹಳಷ್ಟು ಮೂಲಸೌಕರ್ಯವಿದೆ. ಹೊಸ ವೈದ್ಯರು ಗ್ರಾಮೀಣ ಪ್ರದೇಶಗಳ ಆಸ್ಪತ್ರೆಗಳಲ್ಲಿ ಕೆಲಸ ಮಾಡಿ, ಆ ಆಸ್ಪತ್ರೆಯನ್ನು ವಿಶ್ವದರ್ಜೆಯ ಆಸ್ಪತ್ರೆಯಾಗಿ ಪರಿವರ್ತಿಸಬೇಕು. ಕಾರ್ಪೊರೇಟ್ ವಲಯದ ಮಾದರಿಯಲ್ಲಿ ಕಾರ್ಯನಿರ್ವಹಿಸಿ, ಸರ್ಕಾರಿ ಆಸ್ಪತ್ರೆಗಳ ಗುಣಮಟ್ಟ ಹೆಚ್ಚಿಸುವ ಸಂಕಲ್ಪ ತೊಡಬೇಕು ಎಂದರು.

ಸರ್ಕಾರಿ ಆಸ್ಪತ್ರೆಗೆ ಬಡವರು, ಕೆಳ ಮಧ್ಯಮ ವರ್ಗದ ಜನರು ಬರುತ್ತಾರೆ. ಇಂತಹವರು ಆರೋಗ್ಯಕ್ಕಾಗಿ ಹೆಚ್ಚು ಹಣ ಖರ್ಚು ಮಾಡಬಾರದೆಂದು ಸರ್ಕಾರ ಉಚಿತ ಸೇವೆ ನೀಡುತ್ತಿದೆ. ಈ ಸೇವೆಯನ್ನು ಜನರಿಗೆ ತಲುಪಿಸುವ ಸೇತುವೆಯಾಗಿ ವೈದ್ಯರು ಕಾರ್ಯನಿರ್ವಹಿಸಬೇಕು ಎಂದರು.

dr sudhakar1 ಸಾವಿರ ಜನಸಂಖ್ಯೆಗೆ ಒಬ್ಬ ವೈದ್ಯ ಇರಬೇಕೆಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ. ಆದರೆ ದೇಶದಲ್ಲಿ 1,511 ಮಂದಿಗೆ ಒಬ್ಬ ಅಲೋಪತಿ ವೈದ್ಯ ಇದ್ದಾರೆ ಎಂದು 15 ನೇ ವೇತನ ಆಯೋಗ ತಿಳಿಸಿದೆ. ಇಂತಹ ಸಂದರ್ಭದಲ್ಲಿ ಸರ್ಕಾರ ವೈದ್ಯರ ನೇಮಕ ಮಾಡಿರುವುದು ಸಕಾಲಿಕವಾಗಿದೆ. ಕೋವಿಡ್ ಪರಿಸ್ಥಿತಿಯಿಂದಾಗಿ, ಈಗ ವೈದ್ಯರು ಕೇವಲ ವೈದ್ಯರಾಗಿ ಉಳಿಯದೆ ಯೋಧರಾಗಿ ಬದಲಾಗಿದ್ದಾರೆ. ವೈದ್ಯರು ಸಮಾಜಶಾಸ್ತ್ರಜ್ಞ, ಆಡಳಿತಾಧಿಕಾರಿ, ನೀತಿ ನಿರೂಪಕರು, ಮಾನಸಿಕ ತಜ್ಞರಾಗಿ ಅನೇಕ ಪಾತ್ರಗಳನ್ನು ವಹಿಸುತ್ತಿದ್ದಾರೆ ಎಂದರು.

ರಾಜ್ಯದಲ್ಲಿ 2,508 ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ 204 ಸಮುದಾಯ ಆರೋಗ್ಯ ಕೇಂದ್ರಗಳಿವೆ. ಹಳ್ಳಿಗಳಲ್ಲಿ ಕಡ್ಡಾಯ ಸೇವೆ ಸಲ್ಲಿಸುವ ಕಾನೂನು ಹೇರಿಕೆಗೆ ಅವಕಾಶ ನೀಡದೆ ವೈದ್ಯರು ಈ ಭಾಗಗಳಲ್ಲಿ ಕೆಲಸ ಮಾಡಿದರೆ, ಹಳ್ಳಿ ಜನರು ಆರೋಗ್ಯ ಸೇವೆಗಾಗಿ ದೂರದ ಪ್ರದೇಶಕ್ಕೆ ಪ್ರಯಾಣಿಸುವ ಅಗತ್ಯವೇ ಇರುವುದಿಲ್ಲ. ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೇರಿಸುವುದರ ಜೊತೆಗೆ ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳನ್ನು ರೂಪಿಸಲಾಗುತ್ತಿದೆ. ಎಚ್ಡಬ್ಲ್ಯುಸಿ ನಿರ್ಮಾಣದಲ್ಲಿ ಕೇಂದ್ರ ಸರ್ಕಾರ ನೀಡಿದ ಗುರಿಗಿಂತ ಶೇ.125 ರಷ್ಟು ಹೆಚ್ಚು ಸಾಧನೆಯಾಗಿದೆ. ಆದರೆ ವೈದ್ಯರು ಹಳ್ಳಿಗಳಲ್ಲಿ ಕಾರ್ಯನಿರ್ವಹಿಸಿದಾಗ ಮಾತ್ರ ಈ ಸಾಧನೆ ಸಾರ್ಥಕವಾಗಲು ಸಾಧ್ಯ ಎಂದರು.

ವೈದ್ಯರೇ ದೇವರು

ವೈದ್ಯೋ ನಾರಾಯಣೋ ಹರಿ ಎಂದರೆ ವೈದ್ಯರೇ ದೇವರು. ಅನಾರೋಗ್ಯಕ್ಕೊಳಗಾದಾಗ ನೋವು ಕಡಿಮೆ ಮಾಡಿ, ಧೈರ್ಯ ಆತ್ಮವಿಶ್ವಾಸ ತುಂಬುವವರು ವೈದ್ಯರು. ಶ್ರೀಗಂಧದ ಕೊರಡು ತನ್ನನ್ನು ಸವೆಸಿಕೊಂಡಂತೆ ವೈದ್ಯರು ಸಮಾಜಕ್ಕಾಗಿ ಜೀವನ ಸವೆಸುತ್ತಾರೆ. ಎಲ್ಲಾ ವೈದ್ಯರು ತನು, ಮನ ಅರ್ಪಿಸಿ ಕೆಲಸ ಮಾಡಿದರೂ ಜನರು ವೈದ್ಯರ ಮೇಲೆ ವಿಶ್ವಾಸ ಕಡಿಮೆ ಮಾಡಿಕೊಂಡಿದ್ದಾರೆ. ಈ ಮನಸ್ಥಿತಿಯನ್ನು ಬದಲಿಸುವಂತೆ ಕೆಲಸ ಮಾಡಬೇಕು ಎಂದರು.

ಕೋವಿಡ್ ನ ಎರಡನೇ ಅಲೆಯಿಂದ ದೇಶದಲ್ಲಿ 600 ಕ್ಕೂ ಹೆಚ್ಚು ವೈದ್ಯರು ಮೃತಪಟ್ಟಿದ್ದಾರೆ. ಇವರೆಲ್ಲರೂ ಕೊರೊನಾ ಯುದ್ಧದಲ್ಲಿ ಹುತಾತ್ಮರಾದ ಯೋಧರು. ಇಂತಹ ಸನ್ನಿವೇಶ ತಪ್ಪಿಸಲು ವೈದ್ಯರು ತಮ್ಮ ಹಾಗೂ ತಮ್ಮ ಕುಟುಂಬದ ಆರೋಗ್ಯದ ಬಗ್ಗೆಯೂ ಯೋಚಿಸಬೇಕು. ಲಸಿಕೆ ಬಗ್ಗೆ ಜನರು ತಪ್ಪು ಅರಿವಿನಿಂದ ಕೂಡಿರುವ ಈ ಸಮಯದಲ್ಲಿ ಎಲ್ಲಾ ವೈದ್ಯರು ಲಸಿಕೆ ಪಡೆದು, ಜನರಿಗೆ ಮಾದರಿಯಾಗಿ ಹಾಗೂ ತಮ್ಮ ಆರೋಗ್ಯ ಕಾಪಾಡಿಕೊಂಡು ಕೆಲಸ ಮಾಡಬೇಕು ಎಂದು ಸಚಿವರು ಕೋರಿದರು.

ಆರೋಗ್ಯ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಜಾವೇದ್ ಅಕ್ತರ್, ಆಯುಕ್ತ ತ್ರಿಲೋಕ್ ಚಂದ್ರ ಪಾಲ್ಗೊಂಡಿದ್ದರು.

Tags: #cmbsy#karnatakabjpbengaluruCovid19covidindiacovidkarnatakaDr. Sudhakarkarnataka
ShareTweetSendShare
Join us on:

Related Posts

ಗಗನಕ್ಕೇರಿದ ಇಂಧನ ದರ: ಪೆಟ್ರೋಲ್ ಡೀಸೆಲ್ ಮೇಲಿನ ತೆರಿಗೆ ಕಡಿತಗೊಳಿಸಲು ರಾಜ್ಯ ಸರ್ಕಾರದ ಮೇಲೆ ಹೆಚ್ಚಿದ ಜನಾಕ್ರೋಶ

ಗಗನಕ್ಕೇರಿದ ಇಂಧನ ದರ: ಪೆಟ್ರೋಲ್ ಡೀಸೆಲ್ ಮೇಲಿನ ತೆರಿಗೆ ಕಡಿತಗೊಳಿಸಲು ರಾಜ್ಯ ಸರ್ಕಾರದ ಮೇಲೆ ಹೆಚ್ಚಿದ ಜನಾಕ್ರೋಶ

by Shwetha
March 28, 2026
0

ಬೆಂಗಳೂರು: ಕೇಂದ್ರ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಇಳಿಕೆ ಮಾಡುವ ಮೂಲಕ ದೇಶದ ಜನತೆಗೆ ತುಸು ನೆಮ್ಮದಿ ನೀಡಿದೆ. ಕೇಂದ್ರದ ಈ ನಡೆ...

115 ರೂಪಾಯಿ ಪೊಂಗಲ್ ತರಿಸಲು 273 ರೂಪಾಯಿ ಪಾವತಿ: ಸ್ವಿಗ್ಗಿ ದರದ ವಿರುದ್ಧ ಸುಮಲತಾ ಅಂಬರೀಶ್ ಕೆಂಡಾಮಂಡಲ

115 ರೂಪಾಯಿ ಪೊಂಗಲ್ ತರಿಸಲು 273 ರೂಪಾಯಿ ಪಾವತಿ: ಸ್ವಿಗ್ಗಿ ದರದ ವಿರುದ್ಧ ಸುಮಲತಾ ಅಂಬರೀಶ್ ಕೆಂಡಾಮಂಡಲ

by Shwetha
March 28, 2026
0

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಆನ್‌ಲೈನ್ ಫುಡ್ ಡೆಲಿವರಿ ಆ್ಯಪ್‌ಗಳು ಜನರ ಜೀವನದ ಅವಿಭಾಜ್ಯ ಅಂಗವಾಗಿವೆ. ಆದರೆ ಈ ಆ್ಯಪ್‌ಗಳು ವಿಧಿಸುವ ಅತಿಯಾದ ಸೇವಾ ಶುಲ್ಕ ಮತ್ತು ಡೆಲಿವರಿ...

ದೇಶದಲ್ಲಿ ಲಾಕ್‌ಡೌನ್ ಇಲ್ಲ.. ಕೇಂದ್ರದ ಸ್ಪಷ್ಟನೆ

ದೇಶದಲ್ಲಿ ಲಾಕ್‌ಡೌನ್ ಇಲ್ಲ.. ಕೇಂದ್ರದ ಸ್ಪಷ್ಟನೆ

by Shwetha
March 28, 2026
0

ಮಧ್ಯಪ್ರಾಚ್ಯ ಯುದ್ಧದ ಪರಿಣಾಮ ದೇಶದಲ್ಲಿ ಬಿಕ್ಕಟ್ಟು ಉಂಟಾಗಿರುವ ಹಿನ್ನೆಲೆ, ಲಾಕ್‌ಡೌನ್ ಅನಿವಾರ್ಯ ಎಂಬ ವದಂತಿಗಳು ಹರಿದಾಡುತ್ತಿವೆ. ಆದರೆ ಈ ಸುದ್ದಿಗಳನ್ನು ಸಚಿವ ಹರ್ದೀಪ್ ಸಿಂಗ್ ಪುರಿ ತಳ್ಳಿ...

1ನೇ ತರಗತಿ ಪ್ರವೇಶಕ್ಕೆ ವಯೋಮಿತಿ ಸಡಿಲಿಕೆ; ಎಲ್ಲ ಶಾಲೆಗಳಿಗೆ ಅನ್ವಯ

1ನೇ ತರಗತಿ ಪ್ರವೇಶಕ್ಕೆ ವಯೋಮಿತಿ ಸಡಿಲಿಕೆ; ಎಲ್ಲ ಶಾಲೆಗಳಿಗೆ ಅನ್ವಯ

by Shwetha
March 28, 2026
0

ರಾಜ್ಯ ಸರ್ಕಾರ 2026-27ನೇ ಶೈಕ್ಷಣಿಕ ವರ್ಷಕ್ಕೆ 1ನೇ ತರಗತಿ ಪ್ರವೇಶದ ವಯೋಮಿತಿಯನ್ನು 60 ದಿನಗಳವರೆಗೆ ಸಡಿಲಗೊಳಿಸಿದೆ. ಇದುವರೆಗೆ ಜೂನ್ 1ರೊಳಗೆ ಮಗುವಿಗೆ 6 ವರ್ಷ ವಯಸ್ಸು ಪೂರ್ಣವಾಗಿರಬೇಕು...

ದಾವಣಗೆರೆ ಉಪ ಚುನಾವಣೆ CM ಸಂಧಾನ ಅಸ್ತ್ರ ಯಶಸ್ವಿ : ಬಂಡಾಯ ಶಮನ, ಕೈ ಪಾಳಯದಲ್ಲಿ ಮಂದಹಾಸ; ಕಣದಿಂದ ಹಿಂದೆ ಸರಿದ ಸಾದಿಕ್ ಪೈಲ್ವಾನ್

ದಾವಣಗೆರೆ ಉಪ ಚುನಾವಣೆ CM ಸಂಧಾನ ಅಸ್ತ್ರ ಯಶಸ್ವಿ : ಬಂಡಾಯ ಶಮನ, ಕೈ ಪಾಳಯದಲ್ಲಿ ಮಂದಹಾಸ; ಕಣದಿಂದ ಹಿಂದೆ ಸರಿದ ಸಾದಿಕ್ ಪೈಲ್ವಾನ್

by Shwetha
March 28, 2026
0

ಬೆಂಗಳೂರು: ದಾವಣಗೆರೆ ಉಪಚುನಾವಣಾ ಕಣ ರಂಗೇರಿದ್ದು, ಕಾಂಗ್ರೆಸ್ ಪಾಳಯದಲ್ಲಿ ಎದುರಾಗಿದ್ದ ಬಂಡಾಯದ ಭೀತಿ ಇದೀಗ ಸಂಪೂರ್ಣವಾಗಿ ತಿಳಿಯಾಗಿದೆ. ಪಕ್ಷದ ಅಧಿಕೃತ ಅಭ್ಯರ್ಥಿಯ ವಿರುದ್ಧ ಬಂಡಾಯವೆದ್ದು ಸ್ವತಂತ್ರ ಅಭ್ಯರ್ಥಿಯಾಗಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram