ಬಾಲಕಿಯ ಸಾವಿಗೆ ಕಾರಣವಾಗಿದ್ದ ಪಾಪಿಗಳ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ.
ಬಾಲಕಿಯ ದುಪಟ್ಟಾ ಎಳೆದು ಆಕೆಯ ಸಾವಿಗೆ ಈ ಪಾಪಿಗಳು ಕಾರಣರಾಗಿದ್ದರು. ಈ ಘಟನೆ ಉತ್ತರ ಪ್ರದೇಶದ ಅಂಬೇಡ್ಕರ್ ನಗರದಲ್ಲಿ ನಡೆದಿತ್ತು. ವಿದ್ಯಾರ್ಥಿನಿಯೊಬ್ಬಳು ಶಾಲೆಯಿಂದ ಹೋಗುತ್ತಿದ್ದ ಸಂದರ್ಭದಲ್ಲಿ ಬೈಕ್ನಲ್ಲಿ ಬಂದ ಆರೋಪಿ ದುಪಟ್ಟಾವನ್ನು ಎಳೆದಿದ್ದ. ಹೀಗಾಗಿ ಆ ರಭಸಕ್ಕೆ ಕೆಳಗೆ ಬಿದ್ದಿದ್ದಳು. ಆ ನಂತರ ಮತ್ತೊಂದು ಬೈಕ್ ನಲ್ಲಿ ಬಂದಿದ್ದ ಆರೋಪಿ, ಬೈಕ್ ಹತ್ತಿಸಿ ಹತ್ಯೆ ಮಾಡಿದ್ದ.
ಘಟನೆಯ ನಂತರ ಆರೋಪಿಗಳಾದ ಶಹಬಾಜ್ ಮತ್ತು ಫೈಸಲ್ ಪರಾರಿಯಾಗಲು ಯತ್ನಿಸಿದ್ದರು. ಹೀಗಾಗಿ ಅವರ ಕಾಲಿಗೆ ಗುಂಡು ಹಾರಿಸಲಾಗಿದೆ. ಅಲ್ಲದೇ, ಅಪ್ರಾಪ್ತ ವಯಸ್ಸಿನ ಮೂರನೇ ಆರೋಪಿ ಓಡುತ್ತಿರುವಾಗ ಕಾಲಿಗೆ ಮೂಳೆ ಮುರಿತವಾಗಿದೆ ಎಂದು ಎಸ್ಪಿ ಅಜಿತ್ ಸಿನ್ಹಾ ಹೇಳಿದ್ದಾರೆ.
ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ದುಪಟ್ಟಾ ಎಳೆದ ತಕ್ಷಣ ಬಾಲಕಿ ಸೈಕಲ್ನಿಂದ ನಿಯಂತ್ರಣ ಕಳೆದುಕೊಂಡು ಬಿದ್ದಿದ್ದಾಳೆ, ಆಗ ಆರೋಪಿ ಆಕೆಯ ಮೇಲೆ ಬೈಕ್ ಹತ್ತಿಸಿದ್ದಾನೆ. ಕೂಡಲೇ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಅಷ್ಟರಲ್ಲಿ ಅವಳು ಸಾವನ್ನಪ್ಪಿದ್ದಾಳೆ ಎನ್ನಲಾಗಿದೆ. ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.