ಇಬ್ಬರು ವಿದ್ಯಾರ್ಥಿನಿಯರ ಮೇಲೆ ಆಸಿಡ್ ಎರಚಿದ್ದ ಪಾಪಿಗೆ ನ್ಯಾಯಾಲಯವು 10 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿದೆ.
ಈ ಘಟನೆ ಕಳೆದ 9 ವರ್ಷಗಳ ಹಿಂದೆಯೇ ನಡೆದಿತ್ತು. ತಿರುಮಂಗಲಂ ನಿವಾಸಿ ಎಸ್.ಶಂಕರನಾರಾಯಣನ್ ಎಂಬ ವ್ಯಕ್ತಿಯೇ ಈ ಕೃತ್ಯ ಎಸಗಿದ್ದ. ಸದ್ಯ ಆರೋಪ ಸಾಬೀತಾಗಿದ್ದು, ಮಧುರೈ ಮಹಿಳಾ ನ್ಯಾಯಾಲಯ 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದೆ. ಆರೋಪಿಯು 2014ರಲ್ಲಿ ತಿರುಮಂಗಲಂನ ಕಾಲೇಜಿನ ಹತ್ತಿರ ಇಬ್ಬರು ವಿದ್ಯಾರ್ಥಿನಿಯರ ಮೇಲೆ ಆಸಿಡ್ ಎರಚಿದ್ದ.
ಸಂತ್ರಸ್ತರಾಗಿರುವ ಮೀನಾಗೆ ಶೇ.25ರಷ್ಟು ಸುಟ್ಟ ಗಾಯಗಳಾಗಿದ್ದು, ಆಂಗ್ಲೇಶ್ವರಿಗೆ ಶೇ.15ರಷ್ಟು ಸುಟ್ಟ ಗಾಯಗಳಾಗಿವೆ. ಸುಟ್ಟ ಸ್ಥಿತಿಯಲ್ಲಿದ್ದ ಅವರಿಗೆ ಕೂಡಲೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಸದ್ಯ ಅವರು ಅನುಭವಿಸುತ್ತಿರುವ ದೈಹಿಕ ಹಾಗೂ ಮಾನಸಿಕ ಸಂಕಷ್ಟಗಳನ್ನೂ ನ್ಯಾಯಾಲಯ ಗಣನೆಗೆ ತೆಗೆದುಕೊಂಡಿದೆ. ಹೀಗಾಗಿ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಿದೆ.