ಪುಷ್ಪ (Pushpa) ಸಿನಿಮಾದಲ್ಲಿ ನಟಿಸಿರುವ ಜಗದೀಶ್ ಪ್ರತಾಪ್ ಭಂಡಾರಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ನಟಿಯ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ಜಗದೀಶ್,
ಜ್ಯೂನಿಯರ್ ಕಲಾವಿದೆ ಆಗಿ ಕೆಲಸ ಮಾಡುತ್ತಿದ್ದ ಯುವತಿಯನ್ನು ಪರಿಚಯ ಮಾಡಿಕೊಂಡಿದ್ದ. ಆನಂತರ ಅವರೊಂದಿಗೆ ಸಲುಗೆಯಿಂದ ಇದ್ದು, ಆಕೆಯ ಖಾಸಗಿ ವಿಡಿಯೋ ಚಿತ್ರೀಕರಿಸಿದ್ದಾನೆ ಎನ್ನಲಾಗಿದೆ. ನಂತರ ತನ್ನೊಂದಿಗೆ ಸಹಕರಿಸದೇ ಇದ್ದರೆ ಸೋಷಿಯಲ್ ಮೀಡಿಯಾದಲ್ಲಿ ವಿಡಿಯೋ ಹಾಕುವುದಾಗಿ ಬೆದರಿಕೆ ಹಾಕಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ.
ಹೀಗಾಗಿಯೇ ನಟಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಸದ್ಯ ಜಗದೀಶ್ ನನ್ನು ಬಂಧಿಸಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಜಗದೀಶ್ ಅರೆಸ್ಟ್ ಆಗುವಾಗ ಪುಷ್ಪ 2 ಸಿನಿಮಾದ ಚಿತ್ರೀಕರಣದಲ್ಲಿ ಇದ್ದರು ಎಂದು ತಿಳಿದು ಬಂದಿದೆ.