ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿ ಅನಾರೋಗ್ಯದ ಹಿನ್ನೆಲೆಯಲ್ಲಿ ಜಾಮೀನು ಪಡೆದು ಹೊರ ಬಂದಿರುವ ದರ್ಶನ್ಗೆ (Darshan) ಇದುವರೆಗೂ ಶಸ್ತ್ರ ಚಿಕಿತ್ಸೆ ನಡೆದಿಲ್ಲ. ಹೀಗಾಗಿ ಹೈಕೋರ್ಟ್ ನೀಡಿದ ಜಾಮೀನು ಆದೇಶವನ್ನು ಸುಪ್ರೀಂನಲ್ಲಿ (Supreme Court) ಪ್ರಶ್ನಿಸಲು ಗೃಹ ಸಚಿವಾಲಯ ಒಪ್ಪಿಗೆ ಸೂಚಿಸಿದೆ.
ದರ್ಶನ್ ಗೆ ಜಾಮೀನು ನೀಡಿರುವ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಕೆ ಮಾಡುತ್ತೇವೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್ ಹೇಳಿದ್ದಾರೆ.
ಕರಣದಲ್ಲಿ ಪೊಲೀಸರ ಪರವಾಗಿ ವಾದ ಮಂಡಿಸಲು ಹಿರಿಯ ವಕೀಲ ವಿಎನ್ ರಘುಪತಿ ಅವರನ್ನು ಗೃಹ ಸಚಿವಾಲಯ ನೇಮಿಸಿದೆ. ಅನಾರೋಗ್ಯದ ಹಿನ್ನೆಲೆಯಲ್ಲಿ ದರ್ಶನ್ ಅವರಿಗೆ ಹೈಕೋರ್ಟ್ (High Court) 6 ವಾರಗಳ ಮಧ್ಯಂತರ ಜಾಮೀನನ್ನು ಮಂಜೂರು ಮಾಡಿತ್ತು. ಸದ್ಯ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯಲ್ಲಿ ದಾಖಲಾಗಿರುವ ದರ್ಶನ್ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೂ ದರ್ಶನ್ ಗೆ ಶಸ್ತ್ರಚಿಕಿತ್ಸೆ ನಡೆದಿಲ್ಲ. ಹೀಗಾಗಿ ಪೊಲೀಸರು ಮೇಲ್ಮನವಿ ಸಲ್ಲಿಸಲು ಮುಂದಾಗಿದ್ದಾರೆ.