ಮೈಸೂರು : ವಾಹನ ತಪಾಸಣೆ ಸಂದರ್ಭದಲ್ಲಿ ಸಂಚಾರಿ ಪೊಲೀಸರು ಬ್ಯಾರಿಕೇಡ್ ಎಳೆದ ಹಿನ್ನೆಲೆಯಲ್ಲಿ ಬೈಕ್ ನಲ್ಲಿ ತೆರಳುತ್ತಿದ್ದ ಮಹಿಳೆ ಬಿದ್ದು, ಅವರ ಕೈ ಮೇಲೆ ಟಿಪ್ಪರ್ ಹರಿದಿರುವ ಘಟನೆ ನಡೆದಿದೆ.
ಈ ಘಟನೆ ನಗರದಆರ್‌ಎಂಸಿ ವೃತ್ತದಲ್ಲಿ ನಡೆದಿದೆ. ದೇವೇಗೌಡ ಸರ್ಕಲ್ ಕಡೆಯಿಂದ ಆರ್‌ಎಂಸಿ ವೃತ್ತದ ಕಡೆಗೆ ಬೈಕ್ ಬೈಕ್ ತೆರಳುತ್ತಿತ್ತು. ಈ ಸಂದರ್ಭದಲ್ಲಿ ಬೈಕ್ ನಲ್ಲಿ ಹೋಗುತ್ತಿದ್ದ ಸವಾರರು ಹೆಲ್ಮೆಟ್ ಧರಿಸಿರಲಿಲ್ಲ. ಹೀಗಾಗಿ ಪೊಲೀಸರು ಅವರನ್ನು ತಡೆಯುವುದಕ್ಕಾಗಿ ಬ್ಯಾರಿಕೇಡ್ ಎಳೆದಿದ್ದಾರೆ. ಈ ವೇಳೆ ಬೈಕ್ ನ ಹಿಂಬದಿ ಕುಳಿತಿದ್ದ ಮಹಿಳೆ ಕೆಳಗೆ ಬಿದ್ದಿದ್ದಾರೆ. ಆಗ ಅವರ ಕೈ ಮೇಲೆ ಟಿಪ್ಪರ್ ಹಾರಿದಿದೆ.
ಘಟನೆಯಲ್ಲಿ ಮಹಿಳೆಯ ಸ್ಥಿತಿ ಗಂಭೀರವಾಗಿದ್ದು, ಸಂಚಾರಿ ಪೊಲೀಸರ ನಡೆಗೆ ಜನರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.