ಬೆಳಗಾವಿ: ಟ್ರ್ಯಾಕ್ಟರ್ಗಳಲ್ಲಿ (Tractor) ಹೆಚ್ಚು ಸೌಂಡ್ ಬಳಸಿ ಸಾರ್ವಜನಿಕರಿಗೆ ಕಿರಿಕಿರಿ ಉಂಟು ಮಾಡುತ್ತಿದ್ದ ಚಾಲಕರಿಗೆ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ.
ಜಿಲ್ಲೆಯಾದ್ಯಂತ ಎಲ್ಲ ಸಕ್ಕರೆ ಕಾರ್ಖಾನೆಗಳಲ್ಲಿ (Sugar Factory) ಕಬ್ಬು ನುರಿಸುವ ಪ್ರಕ್ರಿಯೆ ಆರಂಭವಾಗಿದೆ. ಜಮೀನಿನಿಂದ ಕಾರ್ಖಾನೆಗೆ ಕಬ್ಬು ಒಯ್ಯುವ ಟ್ರ್ಯಾಕ್ಟರ್ ಗಳಲ್ಲಿ ಚಾಲಕರು ವಿಪರೀತ ಸೌಂಡ್ ಬಳಸುತ್ತಿದ್ದಾರೆ. ಜಾನಪದ ಹಾಡು ಹಾಕಿ ಜನರಿಗೆ ತೊಂದರೆಯಾಗುವಂತೆ ಕಿರಿಕಿರಿ ಮಾಡುತ್ತಿದ್ದಾರೆ ಎಂಬ ದೂರುಗಳು ಕೇಳಿ ಬಂದಿದ್ದವು.
ಈ ಹಿನ್ನೆಲೆಯಲ್ಲಿ ಹಲವು ಟ್ರ್ಯಾಕ್ಟರ್ ಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದರು. ಈ ವೇಳೆ ಟೇಪ್ಗಳನ್ನು ಟ್ರ್ಯಾಕ್ಟರ್ ಚಕ್ರಕ್ಕೆ ಇಟ್ಟು ಹಾನಿಗೊಳಿಸಿದ್ದಾರೆ. ಸಾರ್ವಜನಿಕರಿಗೆ ತೊಂದರೆ ಮಾಡಿದರೆ, ಕ್ರಮ ಕೈಗೊಳ್ಳುವ ಕುರಿತು ಪೊಲೀಸರು ಎಚ್ಚರಿಕೆ ನೀಡಿದ್ದಾರೆ.








