ಬೆಂಗಳೂರು: ಸಿದ್ದರಾಮಯ್ಯ (Siddaramaiah) ಸಿಎಂ ಆಗಿ ಅಧಿಕಾರದಲ್ಲಿದ್ದಾರೆ. ಈಗ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ ಎಂದು ಸಚಿವ ಜಮೀರ್ ಅಹಮ್ಮದ್ ಖಾನ್ (Zameer Ahmed Khan) ಅವರು ಸಿದ್ದರಾಮಯ್ಯ ಪರ ಬ್ಯಾಟ್ ಬೀಸಿದ್ದಾರೆ.
ಬೆಂಗಳೂರಿನಲ್ಲಿಂದು (Bengaluru) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವ ಕಾರಣಕ್ಕೆ ಸರ್ಕಾರ ಬೀಳುತ್ತೆ? ಮುಡಾ (MUDA) ವಿಚಾರದಲ್ಲಿ ಸಿಎಂ ಪಾತ್ರ ಏನಿದೆ? ತಪ್ಪೇನಿದೆ? ಬದಲಿ ಸೈಟ್ ಕೊಟ್ಟಿರೋದು ಬಿಜೆಪಿ ಸರ್ಕಾರದ ಅವಧಿಯಲ್ಲಿ. ಈಗಲೂ ಸಿದ್ದರಾಮಯ್ಯಗೆ ಕಪ್ಪು ಚುಕ್ಕಿ. ಅವರು ರಾಜೀನಾಮೆ ಕೊಡುವ ಮಾತೇ ಇಲ್ಲ ಎಂದು ಹೇಳಿದ್ದಾರೆ.
ಬಿಜೆಪಿ ಬಳಿ ಈಗ ಆರೋಪ ಮಾಡೋಕೆ ಯಾವುದೇ ವಿಚಾರ ಇಲ್ಲ. ಅದಕ್ಕೆ ಇದನ್ನೇ ದೊಡ್ಡ ಸುದ್ದಿ ಮಾಡ್ತಿದ್ದಾರೆ. ಕುಮಾರಸ್ವಾಮಿಯವರು ಅವರ ಬ್ಯಾಕಪ್ಗೆ ನಿಂತಿದ್ದಾರೆ. ಕುಮಾರಸ್ವಾಮಿಗೆ ಸಿದ್ದರಾಮಯ್ಯ ಸಿಎಂ ಆಗಿರುವುದನ್ನು ಸಹಿಸಲು ಆಗುತ್ತಿಲ್ಲ. ಹೀಗಾಗಿ ಟಾರ್ಗೆಟ್ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.