ರಾಷ್ರಪತಿ ಹುದ್ದೆ ನನ್ನ ಸಾಧನೆಯಲ್ಲ , ಕೋಟ್ಯಾಂತರ ಮಹಿಳೆಯ ಕನಸು, ಸಾಮರ್ಥ್ಯದ ಪ್ರತಿಬಿಂಬ
ಭಾರತದ 15ನೇ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ಇಂದು ಪ್ರಮಾಣವಚನ ಸ್ವೀಕರಿಸಿದ್ದಾರೆ. ಪ್ರಮಾಣ ವಚನ ಸ್ವೀಕರಿಸಿದ ನಂತರ ಮಾತನಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸ್ವತಂತ್ರ ಭಾರತದಲ್ಲಿ ಜನಿಸಿದ ದೇಶದ ಮೊದಲ ರಾಷ್ಟ್ರಪತಿ ನಾನು. ಸ್ವತಂತ್ರ ಭಾರತದ ಬಗ್ಗೆ ನಮ್ಮ ಸ್ವಾತಂತ್ರ್ಯ ಹೋರಾಟಗಾರರು ಹೊಂದಿದ್ದ ನಿರೀಕ್ಷೆಗಳನ್ನು ಪೂರೈಸಲು ನಾವು ಇನ್ನಷ್ಟು ಪ್ರಯತ್ನಗಳನ್ನ ಪಡಬೇಕಿದೆ.
“ನಾನು ಬಂದ ಸ್ಥಳ, ಪ್ರಾಥಮಿಕ ಶಿಕ್ಷಣವೂ ಒಂದು ಕನಸು. ದೇಶದ ವಂಚಿತರು, ಬಡವರು, ದಲಿತರು ಮತ್ತು ಬುಡಕಟ್ಟು ಜನರ ಪ್ರತಿಬಿಂಬವವಾಗಿ ನಾನು ನಿಂತಿದ್ದೇನೆ. ನಾನು ರಾಷ್ಟ್ರಪತಿ ಹುದ್ದೆಗೆ ಆಯ್ಕೆಯಾಗಿದ್ದರ ಹಿಂದೆ ಬಡವರ ಆಶೀರ್ವಾದವಿದೆ. ಕೋಟಿಗಟ್ಟಲೆ ಮಹಿಳೆಯರ ಕನಸುಗಳು ಮತ್ತು ಸಾಮರ್ಥ್ಯಗಳ ಪ್ರತಿಬಿಂಬವಾಗಿ ನಾನು ಈ ಹುದ್ದೆಗೆ ಏರಿದ್ದೇನೆ ಎಂದು ಹೇಳಿದ್ದಾರೆ.
ರಾಷ್ಟ್ರಪತಿ ಹುದ್ದೆ ತಲುಪಿದ್ದು ನನ್ನ ವೈಯಕ್ತಿಕ ಸಾಧನೆಯಲ್ಲ, ಇದು ಭಾರತದ ಪ್ರತಿಯೊಬ್ಬ ಬಡವರ ಸಾಧನೆ. ನನ್ನ ನಾಮನಿರ್ದೇಶನವು ಭಾರತದಲ್ಲಿನ ಬಡವರು ಕನಸುಗಳನ್ನು ಮಾತ್ರವಲ್ಲದೆ ಆ ಕನಸುಗಳನ್ನು ನನಸಾಗಿಸಬಹುದು ಎಂಬುದಕ್ಕೆ ಸಾಕ್ಷಿಯಾಗಿದೆ:
ಸಂಸತ್ತಿನಲ್ಲಿ ನನ್ನ ಉಪಸ್ಥಿತಿಯು ಭಾರತೀಯರ ಭರವಸೆ ಮತ್ತು ಹಕ್ಕುಗಳ ಸಂಕೇತವಾಗಿದೆ. ಎಲ್ಲರಿಗೂ ನನ್ನ ಕೃತಜ್ಞತೆಯನ್ನು ವ್ಯಕ್ತಪಡಿಸುತ್ತೇನೆ. ನಿಮ್ಮ ನಂಬಿಕೆ ಮತ್ತು ಬೆಂಬಲ ನನಗೆ ಹೊಸ ಜವಾಬ್ದಾರಿಯನ್ನು ತೆಗೆದುಕೊಳ್ಳಲು ಶಕ್ತಿಯನ್ನು ನೀಡುತ್ತಿದೆ ಎಂದು ಭಾಷಣದಲ್ಲಿ ತಿಳಿಸಿದರು.








